ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ಲಸಿಕೆ, ಔಷಧಿಗಳಿಗಾಗಿ ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ

Last Updated 19 ಏಪ್ರಿಲ್ 2021, 9:35 IST
ಅಕ್ಷರ ಗಾತ್ರ

ಕೋಲ್ಕತ್ತ: ‘ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

‘ದೇಶದೆಲ್ಲೆಡೆ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಪಶ್ಚಿಮ ಬಂಗಾಳ ಸರ್ಕಾರವು ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

‘ಕೋವಿಡ್‌–19 ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಎಲ್ಲಾ ಕ್ರಮಗಳು ಮತ್ತು ವ್ಯವಸ್ಥೆಯನ್ನು ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಅವರು ತಿಳಿಸಿದರು.

‘ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತದಲ್ಲಿ ಚುನಾವಣಾ ರ‍್ಯಾಲಿಯನ್ನು ನಡೆಸುವುದಿಲ್ಲ. ಬದಲಿಗೆ ಚುನಾವಣಾ ಪ್ರಚಾರದ ಕೊನೆ ದಿನವಾದ ಏಪ್ರಿಲ್‌ 26ರಂದು ಸಣ್ಣ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೆ ಜಿಲ್ಲೆಗಳಲ್ಲಿ ಮಮತಾ ಬ್ಯಾನರ್ಜಿ ಅವರು ಕೇವಲ 30 ನಿಮಿಷಗಳ ರ‍್ಯಾಲಿಯನ್ನು ನಡೆಸಲಿದ್ದಾರೆ’ ಎಂದು ಟಿಎಂಸಿ ನಾಯಕ ಡೆರೇಕ್ ಒಬ್ರಿಯನ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭಾನುವಾರ 8,419 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 28 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT