ಶುಕ್ರವಾರ, ಅಕ್ಟೋಬರ್ 7, 2022
28 °C

ನನ್ನ ಆಯ್ಕೆ ಬಡವರೂ ಕನಸು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿ: ಮುರ್ಮು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ರಾಷ್ಟ್ರಪತಿ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಬಳಿಕ, ದೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸ್ವತಂತ್ರ ಭಾರತದಲ್ಲಿ ಜನಿಸಿದದರಲ್ಲಿ ರಾಷ್ಟ್ರಪತಿ ಹುದ್ದೆಗೇರಿದ ಮೊದಲಿಗಳು ನಾನು. ಸ್ವತಂತ್ರ ಭಾರತ ಹೇಗಿರಬೇಕೆಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಇಟ್ಟುಕೊಂಡಿದ್ದ ನಿರೀಕ್ಷೆಗಳನ್ನು ಸಾಕಾರಗೊಳಿಸುವತ್ತ ನಾವು ವೇಗವಾಗಿ ಮುನ್ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಬಡವರು, ದಲಿತರು, ಹಿಂದುಳಿದವರು, ಗಿರಿಜನರು ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗೆ. ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾದ ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ.. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು