ಭಯೋತ್ಪಾದನೆ ನಿಗ್ರಹ ಕಾನೂನು: ಮೂವರು ವಿದ್ಯಾರ್ಥಿಗಳಿಗೆ ‘ಸುಪ್ರೀಂ’ ನೋಟಿಸ್

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾನೂನಿನ ಬಗ್ಗೆ ಅಭಿಪ್ರಾಯಗಳನ್ನು ಸಲ್ಲಿಸುವಂತೆ ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಈ ಮೂವರು ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಸೂಚನೆ ನೀಡಿದೆ.
ಜಾಮೀನು ನೀಡುವ ಸಂದರ್ಭಗಳಲ್ಲಿ ದೆಹಲಿ ಹೈಕೋರ್ಟ್‌ನ ಆದೇಶವನ್ನೇ ಯಾವುದೇ ನ್ಯಾಯಾಲಯ ಪರಿಗಣಿಸಬೇಕಾಗಿಲ್ಲ. ಭಯೋತ್ಪಾದನೆ ನಿಗ್ರಹ ಕಾನೂನು ಮಹತ್ವದ ವಿಷಯವಾಗಿದೆ. ಇಡೀ ದೇಶದಾದ್ಯಂತ ಈ ಕಾನೂನಿನ ಪರಿಣಾಮ ಬೀರುತ್ತಿದೆ ಎಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ. ರಮಾಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಹೇಳಿದೆ.
ಸದ್ಯ ವಿದ್ಯಾರ್ಥಿಗಳ ಜಾಮೀನು ಆದೇಶಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಪೀಠವು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.