ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತ ಡಿವೈಎಫ್‌ಐ ಕಾರ್ಯಕರ್ತನ ಕುಟುಂಬಕ್ಕೆ ಆರ್ಥಿಕ ಸಹಾಯಕ್ಕೆ ಸಿದ್ಧ: ಮಮತಾ

Ready to offer job, financial support to family of deceased DYFI activist: Mamata
Last Updated 15 ಫೆಬ್ರುವರಿ 2021, 15:41 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಎಡಪಕ್ಷಗಳ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡು ಮೃತನಾದ ಡಿವೈಎಫ್‌ಐ ಕಾರ್ಯಕರ್ತ ಮೈದುಲ್ ಇಸ್ಲಾಂ ಮಿಡ್ಡಾ ಅವರ ಕುಟುಂಬದ ಸದಸ್ಯರಿಗೆ ಆರ್ಥಿಕ ಸಹಾಯ ನೀಡಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

‘ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಮರಣೋತ್ತರ ಪರೀಕ್ಷೆಯ ನಂತರದ ಕಾರ್ಯಕರ್ತನ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ’ ಎಂದೂ ಅವರು ಹೇಳಿದ್ದಾರೆ.

‘ಎಡಪಕ್ಷದ ನಾಯಕ ಸುಜನ್ ಚಕ್ರವರ್ತಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಡಿವೈಎಫ್‌ಐ ಕಾರ್ಯಕರ್ತನ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಲು ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಲು ಸಿದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ’ ಎಂದು ಮಮತಾ ಮಾಹಿತಿ ನೀಡಿದ್ದಾರೆ.

‘ಯಾವುದೇ ರೀತಿಯ ಸಾವಿಗೆ ನಾನು ಬೆಂಬಲಿಸುವುದಿಲ್ಲ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಕಾರ್ಯಕರ್ತನನ್ನು ಚಿಕಿತ್ಸೆಗಾಗಿ ಎಲ್ಲಿ ದಾಖಲಿಸಲಾಗಿತ್ತು ಎನ್ನುವ ಬಗ್ಗೆ ಆತನ ಕುಟುಂಬದ ಸದಸ್ಯರಿಗೂ ಮಾಹಿತಿ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಪೊಲೀಸ್ ದೂರು ಸಹ ದಾಖಲಾಗಿಲ್ಲ’ ಎಂದು ಮಮತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT