ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 70 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖ: ಆರೋಗ್ಯ ಸಚಿವಾಲಯ

Last Updated 6 ಸೆಪ್ಟೆಂಬರ್ 2020, 4:19 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಶನಿವಾರ ಒಂದೇ ದಿನ 70 ಸಾವಿರಕ್ಕೂ ಅಧಿಕ ಕೊರೊನಾ ವೈರಸ್‌ ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಒಂದು ದಿನದಲ್ಲಿ ಹೆಚ್ಚು ಸೋಂಕಿತರು ಚೇತರಿಸಿಕೊಂಡಿರುವುದು ಇದೇ ಮೊದಲು ಎಂದು ಹೇಳಲಾಗಿದೆ.ಕೋವಿಡ್–19 ಸೋಂಕಿತರ ಚೇತರಿಕೆ ಪ್ರಮಾಣವು ಶೇ.77.23ಕ್ಕೆ ಏರಿಯಾಗಿದ್ದು, ಸಾವಿನ ಪ್ರಮಾಣ ಶೇ.1.73 ಕ್ಕೆ ಇಳಿದಿದೆ.

ದಿನದಿಂದ ದಿನಕ್ಕೆ ಚೇರಿಸಿಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೆ.1 ರಂದು 57,469 ಮಂದಿ ಚೇತರಿಸಿಕೊಂಡರೆ, ‌ಸೆ.3 ರಂದು 68, 584 ಮಂದಿ ಸೋಂಕಿತರು ಗುಣಮುಖರಾಗಿದ್ದರು.

ದೇಶದಲ್ಲಿ ಐದು ರಾಜ್ಯಗಳಲ್ಲಿ ಚೇತರಿಕೆ ಪ್ರಮಾಣ ಶೇ 60 ರಷ್ಟಿದೆ. ಮಹಾರಾಷ್ಟ್ರದಲ್ಲಿ ಶೇ 21, ತಮಿಳುನಾಡಿನಲ್ಲಿ ಶೇ 12.63, ಆಂಧ್ರ ಪ್ರದೇಶ ಶೇ 11.91, ಕರ್ನಾಟಕದಲ್ಲಿ ಶೇ 8.82, ಉತ್ತರ ಪ್ರದೇಶ ಶೇ 6.14 ರಷ್ಟಿದೆ.

ಈವರೆಗೆ 31,80,866 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 8,62,320 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 70,626ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT