ಮಂಗಳವಾರ, ಮಾರ್ಚ್ 2, 2021
23 °C

ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗೆ 50 ಸಾವಿರ ಸಿಬ್ಬಂದಿ ನೇಮಕಾತಿ: ಅಮಿತ್‌ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ: ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗೆ(ಸಿಎಪಿಎಫ್) 50,000 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅಸ್ಸಾಂನ ಗುವಾಹಟಿಯಲ್ಲಿ ಮಾತನಾಡಿರುವ ಅವರು, 'ಕೇಂದ್ರದ ಗೃಹ ಇಲಾಖೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗೆ(ಸಿಎಪಿಎಫ್) 50,000 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ಸಿಎಪಿಎಫ್‌ನಿಂದ ನಿರ್ಗಮಿಸಿದ ಪ್ರತಿಯೊಬ್ಬರ ಸ್ಥಾನಕ್ಕೆ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬ ಸಿಎಪಿಎಫ್‌ ಯೋಧನಿಗೆ ಒಂದು ವರ್ಷದಲ್ಲಿ 100 ದಿನಗಳ ಕಾಲ ಮನೆಯಲ್ಲಿ ಉಳಿಯಲು ಅವಕಾಶವಿರುತ್ತದೆ' ಎಂದು ತಿಳಿಸಿದ್ದಾರೆ.

'2022ರ ವೇಳೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಂತೃಪ್ತಿ ಅನುಪಾತ ಶೇ 55ಕ್ಕೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಎರಡು ವರ್ಷಗಳ ಹಿಂದೆ ಶೇ 36ರಷ್ಟು ಸಂತೃಪ್ತಿ ಅನುಪಾತವಿತ್ತು. 2024ರ ವೇಳೆಗೆ ಅದನ್ನು ಶೇ 65ಕ್ಕೆ ಹೆಚ್ಚಿಸುವ ಗುರಿ ಇದೆ' ಎಂದು ಅಮಿತ್‌ ಶಾ ಹೇಳಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು