ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಆ.15ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

Last Updated 20 ಜುಲೈ 2021, 17:10 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಪುರಾತತ್ವ ಸಮೀಕ್ಷೆಯ ಆದೇಶದ ಪ್ರಕಾರ ಜುಲೈ 21 ರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಾಮಾನ್ಯವಾಗಿ, ಸ್ವಾತಂತ್ರ್ಯ ದಿನಾಚರಣೆಗೂ ಒಂದು ವಾರ ಮೊದಲೇ ಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'2021ರ ಜುಲೈ 21ರ ಬೆಳಿಗ್ಗೆಯಿಂದ 2021ರ ಆಗಸ್ಟ್ 15 ರಿಂದ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಯೊಳಗೆ ಯಾವುದೇ ಪ್ರವೇಶವಿರಬಾರದು' ಎಂದು ಭಾರತದ ಪುರಾತತ್ವ ಸಮೀಕ್ಷೆಯ ಮಹಾನಿರ್ದೇಶಕರು ನಿರ್ದೇಶಿದ್ದಾರೆ ಎಂದು ಎಎಸ್‌ಐ ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್ ಸಾಂಕ್ರಾಮಿಕ ಮತ್ತು ಭದ್ರತಾ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ಜುಲೈ 15 ರಿಂದಲೇ ಪ್ರವೇಶವನ್ನು ನಿರ್ಬಂಧಿಸಬೇಕೆಂದು ದೆಹಲಿ ಪೊಲೀಸರು ಜುಲೈ 12ರಂದು ಪತ್ರ ಬರೆದು ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT