ನವದೆಹಲಿ: ಕೋವಿಡ್–19 ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಲಸಿಕೆ ಪೋಲಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಬುಧವಾರ ಸೂಚನೆ ನೀಡಿದೆ.

‘ಈ ವರೆಗೆ ರಾಷ್ಟ್ರ ಮಟ್ಟದಲ್ಲಿ ಲಸಿಕೆ ಪೋಲು ಪ್ರಮಾಣ ಶೇ 6ರಷ್ಟಿದೆ. ಈ ಪ್ರಮಾಣ ಶೇ 1ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿರುವ ಕೇಂದ್ರ, ಲಸಿಕೆಯ ಕೊರತೆ ಇಲ್ಲ ಎಂದೂ ಸ್ಪಷ್ಟಪಡಿಸಿದೆ.

ಎರಡು ವಾರಗಳ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಲಸಿಕೆ ಪೋಲಾಗುತ್ತಿರುವ ಕುರಿತು ಪ್ರಸ್ತಾಪಿಸಿದ್ದರು. ತೆಲಂಗಾಣ, ಆಂಧ್ರಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಲಸಿಕೆ ಪೋಲು ಪ್ರಮಾಣ ಶೇ 10ರಷ್ಟಿತ್ತು ಎಂದು ಕಳವಳ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.