ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಪಕ್ಷಗಳಿಂದ ದೇಶಕ್ಕೆ ಒಳಿತು ಆಗಲ್ಲ: ಜಿತಿನ್ ಪ್ರಸಾದ

Last Updated 19 ಜೂನ್ 2021, 15:24 IST
ಅಕ್ಷರ ಗಾತ್ರ

ಲಖನೌ: ಪ್ರಾದೇಶಿಕ ಪಕ್ಷಗಳಿಂದ ದೇಶಕ್ಕೆ ಯಾವುದೇ ಒಳಿತಾಗುವುದಿಲ್ಲ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ ಹೇಳಿದ್ದಾರೆ.

ಬಿಜೆಪಿ ಸೇರ್ಪಡೆಗೊಂಡ ಬಳಿಕಲಖನೌಗೆ ಮೊದಲ ಬಾರಿಗೆ ಭೇಟಿ ನೀಡಿರುವ ಜಿತಿನ್ ಪ್ರಸಾದ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

'ಪ್ರಾದೇಶಿಕ ಪಕ್ಷಗಳ ಪಾಲಿಗೆ ದೇಶ ಹಾಗೂ ರಾಜ್ಯ ಎರಡನೇ ಆದ್ಯತೆಯಾಗಿದೆ. ಈ ಪಕ್ಷಗಳು ನಾಯಕರನ್ನು ರೂಪಿಸುವುದಿಲ್ಲ. ನಾಯಕರೇ ಪಕ್ಷವನ್ನು ರೂಪಿಸುತ್ತಾರೆ. ಅದು ಒಂದು ನಿರ್ದಿಷ್ಟ ವ್ಯಕ್ತಿಯನ್ನೇ ಕೇಂದ್ರಿಕರಿಸುತ್ತದೆ' ಎಂದು ಲಖನೌದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಹೆಸರನ್ನು ಉಲ್ಲೇಖಿಸಿದೆಯೇ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

'ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಜಿತಿನ್ ಪ್ರಸಾದ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನನಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಅವಕಾಶ ದೊರಕಿದೆ. ನನ್ನ ಹೊಸ ರಾಜಕೀಯ ಪಯಣದಲ್ಲಿ ನನ್ನ ತವರು ರಾಜ್ಯದಲ್ಲಿ ನಿಮ್ಮೆಲ್ಲರ ಬಳಿಗೆ ಬರಲು ಅವಕಾಶ ಸಿಕ್ಕಿದೆ' ಎಂದಿದ್ದಾರೆ.

'ಬೆಂಬಲಿಗರ ಆಶಯ ಹಾಗೂ ಗಾಢ ಚಿಂತನೆಯ ಬಳಿಕ ಬಿಜೆಪಿಗೆ ಸೇರ್ಪಡೆಗೊಳ್ಳುವ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶ ಹಾಗೂ ಉತ್ತರ ಪ್ರದೇಶದ ಸುವರ್ಣ ಭವಿಷ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯಿಂದ ಮಾತ್ರ' ಸಾಧ್ಯ ಎಂದು ಹೇಳಿದ್ದಾರೆ.

ಜೂನ್ 9ರಂದು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದರಿಂದ ಮುಂಬರುವ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದೇ ಪರಿಗಣಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT