ಮಂಗಳವಾರ, ಜನವರಿ 18, 2022
27 °C

15-18 ವರ್ಷದವರಿಗೆ ಲಸಿಕೆ; ಇಂದಿನಿಂದ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿ- ಮಾಂಡವಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್-19 ವಿರುದ್ಧ 15-18 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ನೋಂದಣಿ ಕಾರ್ಯಕ್ರಮ ಶನಿವಾರದಿಂದ ಕೋವಿನ್ (COWIN) ಪೋರ್ಟಲ್‌ನಲ್ಲಿ ಪ್ರಾರಂಭವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಮ್ಮ ಕುಟುಂಬದಲ್ಲಿರುವ ಅರ್ಹ ಮಕ್ಕಳನ್ನು ನೋಂದಣಿ ಮಾಡುವಂತೆ ಮನವಿ ಮಾಡಿದ್ದಾರೆ.

'ಹೊಸ ವರ್ಷದ ಸಂದರ್ಭದಲ್ಲಿ, ಇಂದಿನಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ವಿರುದ್ಧದ ರಕ್ಷಣೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿಯನ್ನು ಪ್ರಾರಂಭಿಸಲಾಗುತ್ತಿದೆ. ಲಸಿಕೆ ಪಡೆಯಲು ಅರ್ಹ ಮಕ್ಕಳನ್ನು ನೋಂದಾಯಿಸಬೇಕೆಂದು ನಾನು ಕುಟುಂಬದ ಸದಸ್ಯರನ್ನು ವಿನಂತಿಸುತ್ತೇನೆ. #SabkoVaccineMuftVaccine' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜನವರಿ 3ರಿಂದ 15ರಿಂದ 18 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಿಕೆ ಆರಂಭಿಸಲಾಗುತ್ತದೆ. ಈ ವಯೋಮಾನದವರಿಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು