ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದದ್ದಕ್ಕೆ ಫಾರೂಕ್‌ ವಿಷಾದ

Last Updated 31 ಆಗಸ್ಟ್ 2021, 8:36 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 2018ರಲ್ಲಿ ನಡೆದ ಪಂಚಾಯತ್‌ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸದೇ ಇದ್ದುದ್ದಕ್ಕೆ ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿಷಾದ ವ್ಯಕ್ತಪಡಿಸಿದ್ದಾರೆ.

ಪಾರ್ಲಿಮೆಂಟರಿ ರಾಜ್ ಸಂಸ್ಥೆಗಳನ್ನು (ಪಿಆರ್‌ಐ) ಬಲವರ್ಧನೆಗೊಳಿಸುವ ಸಂಸದೀಯ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರದಲ್ಲೇ ಸರ್ಕಾರ ರಚನೆಯಾಗಲಿದ್ದು, ಇದು ಅಧಿಕಾರಿಗಳು ನಾಗರಿಕರಿಗೆ ಉತ್ತರ ನೀಡುವಂತೆ ಮಾಡುತ್ತದೆ‘ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಭಯೋತ್ಪಾದಕರು ಪಂಚಾಯತ್‌ ನಾಯಕರನ್ನು ಗುರಿಯಾಗಿಸುತ್ತಿದ್ದು, ಅವರಿಗೆ ರಕ್ಷಣೆ ನೀಡುವಂತೆ ವೇದಿಕೆಯಲ್ಲಿದ್ದ ಲೆಫ್ಟಿನೆಂಟ್ ಗವರ್ನರ್‌ ಮನೋಜ್‌ ಸಿನ್ಹಾ ಅವರಿಗೆ ಅಬ್ದುಲ್ಲಾ ಮನವಿ ಮಾಡಿದರು.

ದೇಶದ ಪರ ನಿಲ್ಲುತ್ತಿರುವ ರಾಜಕೀಯ ನಾಯಕರನ್ನು ಭಯೋತ್ಪಾದಕರು ಗುರಿಯಾಗಿಸಿ ದಾಳಿ ನಡೆಸಲು ಹೊಂಚು ಹಾಕುತ್ತಿದ್ದಾರೆ. ಅಂಥ ನಾಯಕರಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ‘ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಆಡಳಿತದ ಅಧಿಕಾರಿಗಳು ದೂರವಾಣಿ ಕರೆಗಳನ್ನು ಸ್ವೀಕರಿಸದೇ ಇರುವುದಕ್ಕೆ ಆಕ್ಷೇಪಿಸಿದ ಅಬ್ದುಲ್ಲಾ, ‘ಅಪರಿಚಿತ ವ್ಯಕ್ತಿ ಕರೆ ಮಾಡಿದಾಗ ಫೋನ್ ಕರೆ ಸ್ವೀಕರಿಸಬೇಡಿ. ಆದರೆ, ಜನರು ಕರೆ ಮಾಡಿದಾಗ, ಅದನ್ನು ಸ್ವೀಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ರಾಜ್ಯಪಾಲ ಸಿನ್ಹಾ ಅವರಲ್ಲಿ ಮನವಿ ಮಾಡಿದರು.

2018ರ ಸೆಪ್ಟೆಂಬರ್‌ನಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿನ್ಯಾಷನಲ್ ಕಾನ್ಫರೆನ್ಸ್ ಭಾಗವಹಿಸಲಿಲ್ಲ. 2019ರಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ನಡೆದ ಬ್ಲಾಕ್ ಡೆವಪ್‌ಮೆಂಟ್ ಕೌನ್ಸಿಲ್ (ಬಿಡಿಸಿ) ಚುನಾವಣೆಯನ್ನೂ ಪಕ್ಷ ಬಹಿಷ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT