ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿಟಲ್ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕಿದೆ; ಸುಪ್ರೀಂಗೆ ಕೇಂದ್ರದ ಅಫಿಡವಿಟ್‌

ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮಾಹಿತಿ ಮತ್ತು ಪ್ರಚಾರ ಸಚಿವಾಲಯ ಅಫಿಡವಿಟ್‌
Last Updated 17 ಸೆಪ್ಟೆಂಬರ್ 2020, 8:48 IST
ಅಕ್ಷರ ಗಾತ್ರ

ನವದೆಹಲಿ: ‘ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಈಗಾಗಲೇ ಸಾಕಷ್ಟು ನೀತಿ ನಿಯಮಗಳ ಚೌಕಟ್ಟುಗಳಿವೆ. ಸುಪ್ರೀಂ ಕೋರ್ಟ್‌ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವಂತಹ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ, ತ್ವರಿತಿಗತಿಯಲ್ಲಿ ಮಾಹಿತಿ ಹಂಚುವ ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿರ್ಬಂಧ ವಿಧಿಸಬೇಕಿದೆ‘ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪ್ರಸ್ತುತ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಸಾಕಷ್ಟು ಕಾನೂನು ಮತ್ತು ನಿಬಂಧನೆಗಳ ಚೌಕಟ್ಟುಗಳಿವೆ. ಆದರೆ, ವಾಟ್ಸ್‌ಆ್ಯಪ್‌, ಟ್ವೀಟರ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ತ್ವರಿತಗತಿಯಲ್ಲಿ ಮಾಹಿತಿ ಹಂಚುವ ಡಿಜಿಟಲ್‌ ಮಾಧ್ಯಮಗಳಿಗೆ ನಿಯಂತ್ರಣ ವಿಧಿಸುವ ಅಗತ್ಯವಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಚಾರ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ.

‘ಡಿಜಿಟಲ್‌ ಮಾಧ್ಯಮಗಳು ವೇಗವಾಗಿ ವಿಶ್ವದ ಮೂಲೆ ಮೂಲೆಗೂ ಮಾಹಿತಿ ತಲುಪಿಸುವ ಪ್ರಕ್ರಿಯೆಯಿಂದ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಪರಿಗಣಿಸಿ, ಆದ್ಯತೆ ಮೇರೆಗೆ ಡಿಜಿಟಲ್ ಮಾಧ್ಯಮಗಳಿಗೆ ನಿಯಂತ್ರಣ ವಿಧಿಸಬಹುದು‘ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದೆ.

‘ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಒಂದು ಬಾರಿ ಮಾತ್ರ ಸುದ್ದಿಗಳು ಮುದ್ರಿತ ಅಥವಾ ಪ್ರಸಾರವಾಗುತ್ತವೆ. ಆದರೆ ಡಿಜಿಟಲ್ ಮಾಧ್ಯಮಗಳಲ್ಲಿ ಮಾಹಿತಿ ತ್ವರಿತಗತಿಯಾಗಿ ತಲುಪುವ ಜತೆಗೆ, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಬಹುದೊಡ್ಡ ವೀಕ್ಷಕ/ ಓದುಗ ವರ್ಗವನ್ನು ತಲುಪತ್ತದೆ‘ ಎಂದು ಸಚಿವಾಲಯ ತನ್ನ ಅಫಿಡವಿಟ್‌ನಲ್ಲಿ ವಿವರಿಸಿದೆ.

ಸುದರ್ಶನ್ ಟಿವಿಯ 'ಬಿಂದಾಸ್ ಬೋಲ್' ಕಾರ್ಯಕ್ರಮದ ಬಗ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಈ ಅಫಿಡವಿಟ್ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT