ಮಂಗಳವಾರ, ಜನವರಿ 25, 2022
24 °C

ಭೀಮಾ ಕೊರೆಗಾಂವ್‌ ಪ್ರಕರಣ: ಸುಧಾ ಭಾರದ್ವಾಜ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: 2018ರ ಭೀಮಾ ಕೊರೆಗಾಂವ್‌ ಮತ್ತು ಎಲ್ಗಾರ್ ಪರಿಷದ್‌ ಪ್ರಕರಣ ಸಂಬಂಧ ವಕೀಲೆ, ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ.

ಸುಧಾ ಭಾರದ್ವಾಜ್‌ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಹೈಕೋರ್ಟ್‌ ಆದೇಶ ಡಿ.8ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಅರ್ಜಿಯ ತ್ವರಿತ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಹಿಮ ಕೋಹ್ಲಿ ಅವರಿದ್ದ ಪೀಠಕ್ಕೆ ಎನ್‌ಐಎ ಪರವಾಗಿ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಮನವಿ ಮಾಡಿದ್ದರು.

2018ರ ಭೀಮಾ ಕೊರೆಗಾಂವ್‌ ಮತ್ತು ಎಲ್ಗಾರ್ ಪರಿಷದ್‌ ಪ್ರಕರಣ ಸಂಬಂಧ ಸುಧಾ ಭಾರದ್ವಾಜ್‌ ಅವರನ್ನು ಪುಣೆ ಪೊಲೀಸರು 2018 ಅ.27ರಂದು ಬಂಧಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು