ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಸೆಪ್ಟೆಂಬರ್ 7ರಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರಿಗೆ ಪ್ರವೇಶ 

Last Updated 27 ಆಗಸ್ಟ್ 2020, 1:18 IST
ಅಕ್ಷರ ಗಾತ್ರ

ಜೈಪುರ್: ಕೋವಿಡ್ 19ನಿಂದಾಗಿ ಬಾಗಿಲು ಮುಚ್ಚಿದ್ದ ಎಲ್ಲ ಧಾರ್ಮಿಕ ಕ್ಷೇತ್ರಗಳು ಸೆಪ್ಟೆಂಬರ್ 7ರಂದು ಬಾಗಿಲು ತೆರೆಯಲಿದ್ದು, ಭಕ್ತರಿಗೆ ಪ್ರವೇಶ ಕಲ್ಪಿಸಲಿವೆ ಎಂದು ರಾಜಸ್ಥಾನ ಸರ್ಕಾರ ಹೇಳಿದೆ.

ರಾಜ್ಯದಲ್ಲಿರುವ ಎಲ್ಲ ಧಾರ್ಮಿಕ ಕ್ಷೇತ್ರಗಳು ಸೆಪ್ಟೆಂಬರ್ 7ರಂದು ತೆರೆಯಲಿವೆ. ಕೋವಿಡ್ 19 ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪಾಲಿಸತಕ್ಕದ್ದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಜೂನ್ 8ರಿಂದ ಧಾರ್ಮಿಕ ಕ್ಷೇತ್ರಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದರೂ ಕೊರೊನಾವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರಿಂದ ರಾಜಸ್ಥಾನ ಸರ್ಕಾರ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ.

ಬುಧವಾರ ರಾಜಸ್ಥಾನದಲ್ಲಿ 1.345 ಹೊಸ ಪ್ರಕರಣಗಳು ವರದಿಯಾಗಿದ್ದು 12 ಮಂದಿ ಸಾವಿಗೀಡಾಗಿದ್ದಾರೆ.ಇಲ್ಲಿಯವರೆಗೆ 14,099 ಸಕ್ರಿಯ ಪ್ರಕರಣಗಳು ಸೇರಿದಂತೆ 74.670 ಸೋಂಕು ಪ್ರಕರಣಗಳಿದ್ದು 992 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT