ಸೋಮವಾರ, ಮಾರ್ಚ್ 20, 2023
30 °C

ಅಲೋಪಥಿ ವಿರುದ್ಧದ ಬಾಬಾ ರಾಮದೇವ್‌ ಹೇಳಿಕೆ: ಅರ್ಜಿ ವಿಚಾರಣೆ 12ಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಲೋಪಥಿ ಚಿಕಿತ್ಸೆ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ವಿಚಾರಣೆಯನ್ನು ತಡೆಹಿಡಿಯುವಂತೆ ಕೋರಿ ಬಾಬಾ ರಾಮದೇವ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜು.12ರಂದು ನಡೆಸುವುದಾಗಿ ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ.

‘ಕೋವಿಡ್‌ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ  ಬಾಬಾ ರಾಮದೇವ್‌ ನೀಡಿರುವ ಹೇಳಿಕೆಯ ಮೂಲ ದಾಖಲೆಗಳು ಭಾನುವಾರ ರಾತ್ರಿ 11 ಗಂಟೆಗೆ ಸಿಕ್ಕಿವೆ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌ ಬೊಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠವು ಹೇಳಿದೆ.

ಕೋವಿಡ್‌ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ರಾಮದೇವ್‌ ಅವರು ನೀಡಿರುವ ಹೇಳಿಕೆಯ ಮೂಲ ದಾಖಲೆಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ಭಾರತೀಯ ವೈದ್ಯಕೀಯ ಸಂಘವು(ಐಎಂಎ) ರಾಮದೇವ್‌ ಅವರ ಹೇಳಿಕೆಯನ್ನು ಖಂಡಿಸಿ ಬಿಹಾರ ಮತ್ತು ಛತ್ತೀಸಗಡದ ವಿವಿಧ ಠಾಣೆಗಳಿಗೆ ದೂರು ನೀಡಿತ್ತು. ಈ ಕುರಿತ ತನಿಖೆಗೆ ತಡೆ ನೀಡಬೇಕೆಂದು ಕೋರಿ ರಾಮ್‌ದೇವ್‌ ಅವರು ಮನವಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು