ಶನಿವಾರ, ಮೇ 8, 2021
26 °C

ರೆಮ್‌ಡಿಸಿವಿರ್‌ ಉತ್ಪಾದನೆ ದ್ವಿಗುಣಕ್ಕೆ ಕ್ರಮ: ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಇನ್ನೊಂದೆಡೆ, ವೈರಸ್‌ ಪ್ರತಿರೋಧಕ ಔಷಧ ರೆಮ್‌ಡಿಸಿವಿರ್‌ಗೆ ಬೇಡಿಕೆಯೂ ಹೆಚ್ಚಿರುವ ಕಾರಣ ಈ ಔಷಧದ ಉತ್ಪಾದನೆಯನ್ನು ದ್ವಿಗುಣಗೊಳಿಸಲಾಗುವುದು ಕೇಂದ್ರ ಸರ್ಕಾರ ಹೇಳಿದೆ.

ರೆಮ್‌ಡಿಸಿವಿರ್‌ ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ ಹೆಚ್ಚುವರಿ 20 ಘಟಕಗಳ ಸ್ಥಾಪನೆಗೆ ಅನುಮೋದನೆ ನೀಡುವಂತೆ ಔಷಧ ಕಂಪನಿಗಳು ಬೇಡಿಕೆ ಸಲ್ಲಿಸಿದ್ದವು. ಕಂಪನಿಗಳ ಈ ಬೇಡಿಕೆಗೆ ಕೇಂದ್ರ ಸರ್ಕಾರ ಅನುಮೋದನೆಯನ್ನೂ ನೀಡಿದೆ ಎಂದು ಮೂಲಗಳು ಹೇಳಿವೆ.

ಸದ್ಯ, ದೇಶದ ವಿವಿಧೆಡೆ ಇಂಥ 20 ಉತ್ಪಾದನಾ ಘಟಕಗಳಿವೆ.

ಈಗ ದಿನಕ್ಕೆ ಈ ಔಷಧದ 1.5 ಲಕ್ಷ ವಯಲ್‌ಗಳನ್ನು ಉತ್ಪಾದಿಸಲಾಗುತ್ತಿದ್ದು, ಶೀಘ್ರವೇ ಪ್ರತಿದಿನ 3 ಲಕ್ಷ ವಯಲ್‌ಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಹಾಗೂ ಗೊಬ್ಬರ ಖಾತೆ ರಾಜ್ಯ ಸಚಿವ ಮನಸುಖ್‌ ಮಾಂಡವೀಯ ಹೇಳಿದರು.

ಅಮೆರಿಕದ ಗಿಲೀಡ್‌ ಸೈನ್ಸಸ್‌ನ ಪರವಾನಗಿಯೊಂದಿಗೆ ದೇಶದ ಏಳು ಕಂಪನಿಗಳು ರೆಮ್‌ಡಿಸಿವಿರ್‌ ಔಷಧವನ್ನು ಉತ್ಪಾದಿಸುತ್ತಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು