ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಔಷಧ, ಪರಿಕರಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸಲು ಪ್ರಿಯಾಂಕಾ ಗಾಂಧಿ ಆಗ್ರಹ

Last Updated 28 ಮೇ 2021, 5:58 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಬಳಸುವ ಜೀವರಕ್ಷಕ ಔಷಧಿಗಳು ಮತ್ತು ಪರಿಕರಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ತೆಗೆದುಹಾಕುವಂತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೋವಿಡ್‌ ಸಂಕಷ್ಟದ ಈ ಸಮಯದಲ್ಲಿ ಇವುಗಳ ಮೇಲೆ ತೆರಿಗೆ ವಿಧಿಸುವುದು ಕ್ರೌರ್ಯ.’ಈ ಸಂದಿಗ್ಧ ಸಮಯದಲ್ಲಿ ಜನರು ಕೋವಿಡ್‌ಗೆ ಸಂಬಂಧಿಸಿದ ಔಷಧಿಗಳು, ಆಂಬುಲೆನ್ಸ್‌, ಹಾಸಿಗೆ, ವೆಂಟಿಲೇಟರ್‌ಗಳು, ಆಮ್ಲಜನಕ, ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಅವುಗಳ ಮೇಲೆ ತೆರಿಗೆ ಹಾಕುವುದು ಕ್ರೌರ್ಯ ಮತ್ತು ಸಂವೇದನಾರಹಿತ ಕ್ರಮ‘ ಎಂದು ಪ್ರಿಯಾಂಕಾ ಟ್ವೀಟ್‌ ಮಾಡಿದ್ದಾರೆ.

’ಶುಕ್ರವಾರ (ಇಂದು) ಜಿಸ್‌ಟಿ ಕೌನ್ಸಿಲ್‌ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರವು ಎಲ್ಲ ಜೀವ ರಕ್ಷಕ ಔಷಧ, ಸಾಧನಗಳ ಮೇಲಿನ ತೆರಿಗೆಯನ್ನು ತೆಗೆದುಹಾಕಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.

ಕೋವಿಡ್‌ ವಿರುದ್ಧ ಹೋರಾಡಲು ಸಾಮಾನ್ಯವಾಗಿ ಬಳಸುವ ಸಾಧನಗಳು ಮತ್ತು ಅವುಗಳ ಮೇಲೆ ವಿಧಿಸಲಾಗುವ ಜಿಎಸ್‌ಟಿ ದರ ಪಟ್ಟಿಯನ್ನೂ ಟ್ವೀಟ್‌ಗೆ ಲಗತ್ತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT