ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಖ್ಯಾತ ಉರ್ದು ಕವಿ ರಾಹತ್‌ ಇಂದೋರಿ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಂದೋರ್: ಕೋವಿಡ್‌–19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಉರ್ದು ಕವಿ ರಾಹತ್‌ ಇಂದೋರಿ(70), ಮಂಗಳವಾರ ಹೃದಯಾಘಾತದಿಂದ ಅರವಿಂದೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅವರ ಪುತ್ರ ಸಟ್ಲಾಜ್‌ ಇಂದೋರಿ ತಿಳಿಸಿದರು.

ಸೋಂಕು ದೃಢಪಟ್ಟ ಕಾರಣದಿಂದಾಗಿ ಮಂಗಳವಾರ ಬೆಳಗ್ಗೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ವೀಟ್‌ ಮೂಲಕ ಅವರೇ ಈ ಮಾಹಿತಿಯನ್ನು ತಿಳಿಸಿದ್ದರು. ‘ಕೊರೊನಾ ಸೋಂಕಿನ ಪ್ರಾರಂಭಿಕ ಲಕ್ಷಣಗಳು ಕಾಣಿಸಿಕೊಂಡ ಕಾರಣದಿಂದ ಸೋಮವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಸೋಂಕು ಇರುವುದು ದೃಢಪಟ್ಟಿದ್ದು, ಶೀಘ್ರದಲ್ಲೇ ಗುಣಮುಖನಾಗಿ ಬರುವಂತೆ ಪ್ರಾರ್ಥಿಸುತ್ತೇನೆ’ ಎಂದು ತಮ್ಮ ಕೊನೆಯ ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದರು.

ಇವರು ಬರೆದ 1997ರಲ್ಲಿ ತೆರೆಕಂಡ ಇಷ್ಕ್‌ ಸಿನಿಮಾದ ‘ನೀಂದ್‌ ಚುರಾಯಿ ಮೇರಿ’ ಹಾಗೂ 2003ರಲ್ಲಿ ತೆರೆಕಂಡ ಮುನ್ನಾಭಾಯಿ ಎಂಬಿಬಿಎಸ್‌ ಸಿನಿಮಾದ ‘ಎಂ ಬೊಲೆ ತೊ’ ಹಾಡು ಇಂದಿಗೂ ಜನಪ್ರೀಯವಾಗಿದೆ. ವರ್ಷದ ಆರಂಭದಲ್ಲಿ ಇವರು ಬರೆದ ‘ಬುಲಾತಿ ಹೆ ಮಗರ್ ಜಾನೆ ಕಾ ನಹಿ’ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು