ಗುರುವಾರ , ಜನವರಿ 28, 2021
15 °C
ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್ ಶಾಸ್ತ್ರಿಯವರ 55ನೇ ಪುಣ್ಯತಿಥಿ

ಕೃಷಿ ಕಾಯ್ದೆಗಳ ರದ್ಧತಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 55 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೂರು ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಲಾಲ್‌ಬಹದ್ದೂರ್ ಶಾಸ್ತ್ರಿಯವರ ‘ಜೈ ಜವಾನ್, ಜೈ ಕಿಸಾನ್‘ ಎಂಬ ಘೋಷವಾಕ್ಯವನ್ನು ನೆನಪಿಸಿಕೊಂಡ ಮಮತಾ ಅವರು, ‘ರೈತರು ಈ ನಾಡಿನ ಹೀರೊಗಳು‘ ಎಂದು ಹೇಳಿದರು.

‘ಲಾಲ್ ‌ಬಹದ್ದೂರ್ ಶಾಸ್ತ್ರಿಯವರಿಗೆ ಅವರ 55ನೇ ಪುಣ್ಯತಿಥಿಯ ಸಂದರ್ಭದಲ್ಲಿ ಗೌರವ ಸಲ್ಲಿಸಿದ್ದೇನೆ. ಅವರು ‘ಜೈ ಜವಾನ್, ಜೈ ಕಿಸಾನ್‘ ಎಂಬ ಸ್ಪೂರ್ತಿದಾಯಕ ಘೋಷಣೆಯನ್ನು ಕೊಟ್ಟು ಹೋಗಿದ್ದಾರೆ. ರೈತರು ಈ ದೇಶದ ಹೀರೊಗಳು. ಕೇಂದ್ರ ಸರ್ಕಾರ, ಈಗ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು‘ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಹೇಳಿಕೆ ನೀಡಿದ್ದ ಅವರು, ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತೃಣಮೂಲ ಕಾಂಗ್ರೆಸ್‌ ಬೆಂಬಲ ಸೂಚಿಸುತ್ತದೆ ಎಂದು ತಿಳಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು