ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ 2021: ಗಮನಸೆಳೆದ ಅಯೋಧ್ಯೆ ರಾಮಮಂದಿರ ಸ್ತಬ್ಧಚಿತ್ರ
LIVE

ದೇಶವು 72ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ 3 ಕೃಷಿ ಕಾನೂನುಗಳನ್ನು ರದ್ಧುಪಡಿಸಬೇಕು ಎಂದ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರೇಡ್‌ ನಡೆಯುವ ರಾಜಪಥ್‌ನಲ್ಲಿ ಸಾವಿರಾರು ಮಂದಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿವರ್ಷ ಪರೇಡ್‌ ವೀಕ್ಷಣೆಗೆ ಲಕ್ಷಾಂತರ ಜನರು ಸೇರುತ್ತಾರೆ. ಆದರೆ ಈ ಬಾರಿ ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ 25 ಸಾವಿರ ಜನರಿಗಷ್ಟೇ ಅವಕಾಶ ನೀಡಲಾಗಿದೆ. ಗಣರಾಜ್ಯೋತ್ಸವ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
Last Updated 26 ಜನವರಿ 2021, 14:42 IST
ಅಕ್ಷರ ಗಾತ್ರ
09:0226 Jan 2021

ಗಣರಾಜ್ಯೋತ್ಸವ ಪಥಸಂಚಲನ: ಗಮನಸೆಳೆದ ಅಯೋಧ್ಯೆ ರಾಮಮಂದಿರ ಸ್ತಬ್ಧಚಿತ್ರ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಮಾದರಿ ಒಳಗೊಂಡ, ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರ ಇಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಗಮನಸೆಳೆಯಿತು.

ಸ್ತಬ್ಧಚಿತ್ರದ ಬಹುಪಾಲು ಸ್ಥಳವನ್ನು ರಾಮಮಂದಿರದ ಮಾದರಿ ಆವರಿಸಿದ್ದರೆ, ಮುಂಭಾಗ ಮಹರ್ಷಿ ವಾಲ್ಮೀಕಿ ಕುಳಿತ ಭಂಗಿಯಲ್ಲಿರುವ ಎತ್ತರದ ಮೂರ್ತಿ ಇತ್ತು. ‘ಇದು, ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ ಬಿಂಬಿಸಲಿದೆ’ ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ತಿಳಿಸಿದರು. ಸಂತರ ವೇಷದಲ್ಲಿದ್ದ ಹಲವರು, ಕರಕುಶಲ ಕಲಾವಿದರು ಇದ್ದರು.

07:3126 Jan 2021

‘ಕೋವಿಡ್‌ ಅಲೆ ತಗ್ಗಿಸುವಲ್ಲಿ ಸರ್ಕಾರ ಯಶಸ್ವಿ’

ಬೆಂಗಳೂರು: ‘ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಹಗಲಿರುಳು ಶ್ರಮಿಸಿ. ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ’ ಎಂದು ರಾಜ್ಯಪಾಲ ವಜುಭಾಯಿ​​​ ವಾಲಾ ಹೇಳಿದರು.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮಂಗಳವಾರ ನಡೆದ 72 ನೇ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೋವಿಡ್‌ ಬಿಕ್ಕಟ್ಟಿನ ಅವಕಾಶವನ್ನು ನಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿ.ಪಿ.ಇ. ಕಿಟ್, ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿಯವರು ದೂರದರ್ಶಿತ್ವ ‘ಆತ್ಮ ನಿರ್ಭರ್ ಭಾರತ್’ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆ’ ಎಂದು ಬಣ್ಣಿಸಿದರು.

‘ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತೇನೆ. ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೋವಿಡ್-19ರ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಿಸಿದ್ದೇವೆ’ ಎಂದೂ ವಾಲಾ ಹೇಳಿದರು.

07:2726 Jan 2021

ನನ್ನ ಹೃದಯಕ್ಕೆ ಹತ್ತಿರವಾದ ಭಾರತಕ್ಕೆ ಗಣರಾಜ್ಯೋತ್ಸವದ ಶುಭಾಶಯಗಳು: ಇಂಗ್ಲೆಂಡ್‌ ಪ್ರಧಾನಿ ಬೋರಿಸ್‌ ಜಾನ್ಸನ್‌

07:1826 Jan 2021

ಗಣತಂತ್ರ ದಿನದ ಪಥಸಂಚಲನದಲ್ಲಿ ಬಾಂಗ್ಲಾ ಸೇನೆ ಭಾಗವಹಿಸಿದ್ದೇಕೆ?

06:2226 Jan 2021
06:1526 Jan 2021

ಸುಕೋಯ್‌–30 ಯುದ್ಧ ವಿಮಾನಗಳಿಂದ ಆಕಾಶದಲ್ಲಿ ’ತ್ರೀಶೂಲ’ ರಚನೆ

06:1226 Jan 2021

ರಾಜ್ಯದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ

06:0226 Jan 2021

ವಾಯುಪಡೆ ಸಾಮಾರ್ಥ್ಯ ಪ್ರದರ್ಶನ

05:5226 Jan 2021

ಇಂಡೋ–ಟಿಬೆಟ್‌ ಸೇನಾ ಸಿಬ್ಬಂದಿಯಿಂದ ಪಾಂಗಾಂಗ್‌ ನದಿ ತೀರದಲ್ಲಿ ಗಣರಾಜ್ಯೋತ್ಸವ

05:5126 Jan 2021

ಲಸಿಕೆ ಅಭಿವೃದ್ಧಿಯ ವಿವಿಧ ಪ್ರಕ್ರಿಯೆಗಳ ಮೇಲೆ ಬೆಳಕು ಚೆಲ್ಲುವ 'ಆತ್ಮ-ನಿರ್ಭರ ಭಾರತ್ ಅಭಿಯಾನ: COVID' ಎಂಬ ವಿಷಯ ಕುರಿತ ಜೈವಿಕ ತಂತ್ರಜ್ಞಾನ ಇಲಾಖೆಯ ಸ್ತಬ್ಧಚಿತ್ರ.