ಶುಕ್ರವಾರ, ಜನವರಿ 21, 2022
30 °C

ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರದ ವಿರುದ್ಧ ದೆಹಲಿ ಪೊಲೀಸರ ಪ್ರತಿಭಟನೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಜನವರಿ 26 ಗಣರಾಜ್ಯೋತ್ಸವದ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರವನ್ನು ಖಂಡಿಸಿ ದೆಹಲಿ ಪೊಲೀಸ್ ಮಹಾಸಂಘದ ನೇತೃತ್ವದಲ್ಲಿ ಗಾಯಗೊಂಡ ಪೊಲೀಸರು ಹಾಗೂ ಕುಟುಂಬ ಸದಸ್ಯರು ಶನಿವಾರದಂದು ಶಾಹೀದಿ ಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯಲ್ಲಿ ದೆಹಲಿ ಪೊಲೀಸ್‌ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

 

 

 

ನನ್ನನ್ನು ಕೆಂಪುಕೋಟೆಯ ಗೇಟ್ ಬಳಿ ನಿಯೋಜಿಸಲಾಗಿತ್ತು. ಕೆಂಪುಕೋಟೆಯಲ್ಲಿ ಧ್ವಜವನ್ನು ಹಾರಿಸಿದ ಗುಂಪನ್ನು ಹೊರ ತರುವ ಪ್ರಯತ್ನ ಮಾಡುತ್ತಿದ್ದೆವು. ಇದ್ದಕ್ಕಿದ್ದಂತೆ ನಮ್ಮ ಮೇಲೆ ದಾಳಿ ನಡೆಸಿದರು. ಖಡ್ಗ ಹಾಗೂ ಕೋಲುಗಳು ಅವರ ಬಳಿಯಿದ್ದವು. ನನ್ನ ತಲೆ ಹಾಗೂ ಕಾಲಿಗೆ ಗಾಯವಾಗಿದೆ ಎಂದು ದೆಹಲಿ ಪೊಲೀಸ್ ಪೇದೆ ಅಶೋಕ್ ಕುಮಾರ್, ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದರು.

ಇದನ್ನೂ ಓದಿ: 

 

ಪೂರ್ವ ಯೋಜಿತ ಹಾದಿಯನ್ನು ಮುರಿದ ಪ್ರತಿಭಟನಾ ನಿರತ ರೈತರು ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿ ದಾಂಧಲೆ ನಡೆಸಿ, ಧಾರ್ಮಿಕ ಹಾಗೂ ರೈತ ಸಂಘಟನೆಯ ಧ್ವಜವನ್ನು ಹಾರಿಸಿದ್ದರು.

 

 

 

ಘಟನೆಯಲ್ಲಿ 400ರಷ್ಟು ಪೊಲೀಸರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸರನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

 

ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಯ 12 ನಾಯಕರಿಗೆ ದೆಹಲಿ ಪೊಲೀಸ್ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು