ಶುಕ್ರವಾರ, ಮೇ 20, 2022
25 °C

ಗಣರಾಜ್ಯೋತ್ಸವ ದಿನದ ಹಿಂಸಾಚರಣೆ: ಎಸ್‌ಐಟಿ ತನಿಖೆಗಾಗಿ ಮೃತ ಯುವಕನ ಕುಟುಂಬ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ದೆಹಲಿಯ ಐಟಿಒ ರಸ್ತೆಯ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸಾವನ್ನಪ್ಪಿದ 25 ವರ್ಷದ ಯುವಕನ ಕುಟುಂಬವು, ಘಟನೆಯ ಕುರಿತು ಎಸ್ಐಟಿ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕೋರಿ ಬುಧವಾರ ನ್ಯಾಯಾಲಯದ ಮೆಟ್ಟಿಲೇರಿದೆ.

ಘಟನೆಯಲ್ಲಿ ಮೃತಪಟ್ಟ ಯುವಕ ನವರೀತ್ ಸಿಂಗ್ ಅವರ ಅಜ್ಜ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯು ಗುರುವಾರ ನಡೆಯುವ ಸಾಧ್ಯತೆ ಇದೆ.

ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಅನೇಕ ರೈತರು ಘಾಜಿಪುರ ಗಡಿಯಿಂದ ಬಳಸುದಾರಿಯಲ್ಲಿ ಬರುತ್ತಿದ್ದರು. ನವರೀತ್ ಸಿಂಗ್ ಕೂಡಾ ಇದೇ ದಾರಿಯಲ್ಲಿ ಬಂದರು. ದೆಹಲಿಯ ಐಟಿಒ ರಸ್ತೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು