ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜೆಗಳ ಕೈಯಲ್ಲಿ ಭಾರತದ ಭವಿಷ್ಯ: ರಾಹುಲ್ ಗಾಂಧಿ

Last Updated 26 ಜನವರಿ 2021, 8:48 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಭವಿಷ್ಯ ಪ್ರಜೆಗಳ ಕೈಯಲ್ಲಿದೆ. ಅದು ‘ಸತ್ಯಾಗ್ರಹಿ’ ರೈತರೇ ಆಗಿರಲಿ ಅಥವಾ ಕಾರ್ಮಿಕರು, ದೊಡ್ಡ, ಮಧ್ಯಮ ಮತ್ತು ಸಣ್ಣ ಉದ್ಯಮಿಗಳು, ಉದ್ಯೋಗಾಕಾಂಕ್ಷಿಗಳು ಮತ್ತುಹಣದುಬ್ಬರ ಎದುರಿಸುತ್ತಿರುವ ಗೃಹಿಣಿಯರೇ ಆಗಿರಬಹುದು ಎಂದು ರಾಹುಲ್‌ ಗಾಂಧಿ ಅವರು ಹೇಳಿದರು.

72ನೇ ಗಣರಾಜ್ಯೋತ್ಸವದ ಶುಭಕೋರಿದ ಅವರು, ‘ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಹೋರಾಡಿದವರನ್ನು ಮರೆಯಬಾರದು. ಗಣರಾಜೋತ್ಸವದ ದಿನವಾದ ಇಂದು ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವವನ್ನು ನವೀಕರಿಸುವುದಾಗಿ ಪ್ರತಿಜ್ಞೆ ಮಾಡೋಣ. ಜೈ ಹಿಂದ್‌’ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರೂ ಶುಭಕೋರಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT