ಟಿಆರ್‌ಪಿ ವಂಚನೆ: ಮುಂಬೈ ಪೊಲೀಸರಿಂದ ರಿಪಬ್ಲಿಕ್ ಟಿವಿ ಸಿಇಒ ಬಂಧನ

ಮುಂಬೈ: ಟಿಆರ್‌ಪಿ ಹಗರಣದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಕಂಚಂದಾನಿ ಅವರನ್ನು ಭಾನುವಾರ ಬಂಧಿಸಿದ್ದಾರೆ.
ಟಿಆರ್‌ಪಿಯಲ್ಲಿ ವಂಚನೆ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಂಚಂದಾನಿ ಅವರನ್ನು ಮುಂಬೈ ಪೊಲೀಸರು ಈ ಹಿಂದೆ ವಿಚಾರಣೆಗೆ ಒಳಪಡಿಸಿದ್ದರು.
ಬಂಧಿತರಾಗಿರುವ ಕಂಚಂದಾನಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೆಲ ಚಾನೆಲ್‌ಗಳು ಟಿಆರ್‌ಪಿಯಲ್ಲಿ ವಂಚನೆ ನಡೆಸಿವೆ ಎಂದು ಆರೋಪಿಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ ಇಂಡಿಯಾವು( ಬಾರ್ಕ್) ಹನ್ಸಾ ರಿಸರ್ಚ್ ಗ್ರೂಪ್ ಮೂಲಕ ಪ್ರಕರಣ ದಾಖಲಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಒಟ್ಟು 13 ಜನರನ್ನು ಮುಂಬೈ ಪೊಲೀಸರ ವಿಶೇಷ ತನಿಖಾ ತಂಡ ಬಂಧಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.