ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಮಧ್ಯಂತರ ಜಾಮೀನಿಗಾಗಿ ಅರ್ನಬ್ ‘ಸುಪ್ರೀಂ’ ಮೊರೆ ‌

Last Updated 10 ನವೆಂಬರ್ 2020, 11:03 IST
ಅಕ್ಷರ ಗಾತ್ರ

ನವದೆಹಲಿ: ಇಂಟೀರಿಯರ್‌ ಡಿಸೈನರ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದಡಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಅರ್ನಬ್‌ ಮತ್ತು ಇನ್ನಿಬ್ಬರು ಆರೋಪಿಗಳು ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ತಿರಸ್ಕರಿಸಿದ ನ್ಯಾಯಾಲಯವು ಸ್ಥಳೀಯ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಆತ್ಮಹತ್ಯೆ ಪ್ರಕರಣದಡಡಿ ನ.4 ರಂದು ಅರ್ನಬ್‌ ಮತ್ತು ಇತರ ಇಬ್ಬರನ್ನು ಅಲಿಬಾಗ್‌ ಪೊಲೀಸರು ಬಂಧಿಸಿದ್ದರು.

ಮಹಾರಾಷ್ಟ್ರದ ಅಲಿಬಾಗ್‌ನ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ ಅವರು 2018ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳದಲ್ಲಿ ಪೊಲೀಸರಿಗೆ ದೊರೆತಿದ್ದ ಪತ್ರದಲ್ಲಿ, ‘ತಮಗೆ ಪಾವತಿಸಬೇಕಿದ್ದ ₹5.40 ಕೋಟಿ ಹಣವನ್ನು ಅರ್ನಬ್‌ ಗೋಸ್ವಾಮಿ ಮತ್ತು ಇತರ ಇಬ್ಬರು ಪಾವತಿಸಿಲ್ಲ. ಆ ಕಾರಣ ನಮ್ಮ ಕುಟುಂಬ ತೀವ್ರ ಆರ್ಥಿಕ ತೊಂದರೆಗೆ ಒಳಗಾಯಿತು’ ಎಂದು ಅನ್ವಯ್‌ ನಾಯಕ್‌ ಬರೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT