ಗುರುವಾರ , ಅಕ್ಟೋಬರ್ 1, 2020
21 °C

ಕೇರಳ: ಭೂಕುಸಿತದಿಂದ ಇಡುಕ್ಕಿಯಲ್ಲಿ ಸತ್ತವರ ಸಂಖ್ಯೆ 42ಕ್ಕೆ ಏರಿಕೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಇಡುಕ್ಕಿ: ಇಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿದೆ. ಭೂಕುಸಿತದಲ್ಲಿ ಟೀ ಎಸ್ಟೇಟ್ ಕಾರ್ಮಿಕರ 20 ಮನೆಗಳು ನೆಲಸಮವಾಗಿವೆ.

ನಾಪತ್ತೆಯಾದವರ ಹುಡುಕಾಟ ಕಾರ್ಯದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ ಸಿಬ್ಬಂದಿ ಜೊತೆಗೆ ಸ್ಥಳೀಯರೂ ಕೈಜೋಡಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ರಕ್ಷಣಾ ಪಡೆಯ (ಎನ್.ಡಿ.ಆರ್.ಎಫ್) ಎರಡು ತುಕಡಿಗಳನ್ನು ನಿಯೋಜಿಸಲಾಗಿದೆ.

ಭಾನುವಾರ ಮಧ್ಯಾಹ್ನದವರೆಗೂ 15 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ 20 ಹಾಗೂ ಶುಕ್ರವಾರ 7 ಮೃತದೇಹಗಳನ್ನು ಹೊರತೆಗೆಯಲಾಗಿತ್ತು.ಇನ್ನೂ 20 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಳೆಯ ನಡುವೆಯೂ ಹುಡುಕಾಟ ನಡೆದಿದೆ.

ಶುಕ್ರವಾರ ರಕ್ಷಿಸಲಾಗಿದ್ದ 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಚ್.ದಿನೇಶನ್ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾನುವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ. 

ಪೆಟ್ಟಿಮುಡಿಯ ಆಕರ್ಷಕ ಭೌಗೋಳಿಕ ಪ್ರದೇಶದ ಚಿತ್ರಣವೇ ಈಗ ಬದಲಾಗಿದ್ದು, ಕುಸಿದಿರುವ ಮಣ್ಣಿನ ನಡುವೆ ಮನೆಯ ಅವಶೇಷಗಳು ಕಾಣಿಸುತ್ತಿವೆ. ಶುಕ್ರವಾರ ಬೆಳಗಿನ ಜಾವ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾಲು ಮನೆಗಳು ಕುಸಿದಿದ್ದವು. 

ಎನ್.ಡಿ.ಆರ್.ಎಫ್.ನ ದಕ್ಷಿಣ ಭಾರತದ ಮುಖ್ಯಸ್ಥರಾದ ರೇಖಾ ನಂಬಿಯಾರ್ ಅವರು, ‘ರಕ್ಷಣಾ ಕಾರ್ಯಗಳಿಗೆ 55 ಜನರ ತಂಡವನ್ನು ನಿಯೋಜಿಸಲಾಗಿದೆ. ನದಿ ಪಾತ್ರದಲ್ಲಿಯೂ ಹುಡುಕಾಟ ನಡೆದಿದ್ದು, ದೇಹಗಳು ಮಣ್ಣಿನಡಿ ಸಿಲುಕಿರುವ ಸಂಭವವಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು