ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರ ಅಮಾನತು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) 12 ಶಾಸಕರ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಒಂದು ಅಧಿವೇಶನಕ್ಕಿಂತಲೂ ಹೆಚ್ಚು ಕಾಲ ಶಾಸಕರನ್ನು ಅಮಾನತು ಮಾಡಿರುವುದು 'ಅಸಾಂವಿಧಾನಿಕ', 'ಕಾನೂನು ಬಾಹಿರ' ಮತ್ತು 'ವಿಚಾರಹೀನ' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ಎದುರಾಗಿದೆ.
ಇದನ್ನೂ ಓದಿ: ಮೋದಿ, ಯೋಗಿ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಶಿಕ್ಷಕರ ಸೂಚನೆ!: ತನಿಖೆಗೆ ಆದೇಶ
Supreme Court quashes one-year suspension from the Maharashtra Legislative Assembly of 12 BJP MLAs while terming it unconstitutional and arbitrary. MLAs were suspended for one year for allegedly misbehaving with the presiding officer. pic.twitter.com/LsXiT9MtNR
— ANI (@ANI) January 28, 2022
ಮಹಾರಾಷ್ಟ್ರದ ಸದನದಲ್ಲಿ ಅಂಗೀಕರಿಸಿದ ಅಮಾನತು ನಿರ್ಣಯವನ್ನು ಪ್ರಶ್ನಿಸಿ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ವರ್ಷ ಜುಲೈ 5ರಂದು ಸ್ಪೀಕರ್ ಭಾಸ್ಕರ್ ಜಾಧವ್ ಅವರ ಬಳಿ ಅನುಚಿತ ವರ್ತನೆಗೆ ಸಂಬಂಧಿಸಿದಂತೆ 12 ಶಾಸಕರನ್ನು ಒಂದು ವರ್ಷ ಅಮಾನತು ಮಾಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.