ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ನಿಧನದ ನಂತರ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವುದಕ್ಕಾಗಿ ಜಮ್ಮು–ಕಾಶ್ಮೀರದಲ್ಲಿ ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದ್ದು, ಮೊಬೈಲ್ ಫೋನ್, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ.

ಗಿಲಾನಿ ನಿಧನದ ನಂತರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಶ್ಮೀರದ ಹಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಮೊಬೈಲ್ –ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ನಂತರ, ಶುಕ್ರವಾರ ರಾತ್ರಿ ಈ ಸಂವಹನ ಸೇವೆಗಳನ್ನು ಪುನರ್‌ಸ್ಥಾಪಿಸಲಾಗಿತ್ತು. ಆದರೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮೊಬೈಲ್, ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.