ಬುಧವಾರ, ಅಕ್ಟೋಬರ್ 27, 2021
21 °C
ಮೃತ ಕುಟುಂಬಕ್ಕೆ ₹45 ಲಕ್ಷ, ಒಬ್ಬರಿಗೆ ಸರ್ಕಾರಿ ಉದ್ಯೋಗ

ಲಖಿಂಪುರ ಹಿಂಸಾಚಾರ; ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ನಡೆಸಲಾಗುತ್ತದೆ ಎಂದು ಪ್ರಕಟಿಸಿರುವ ಉತ್ತರ ಪ್ರದೇಶ ಸರ್ಕಾರ, ಮೃತ ರೈತರ ಕುಟುಂಬಗಳಿಗೆ ತಲಾ ₹45 ಲಕ್ಷ ಪರಿಹಾರ ಘೋಷಿಸಿದೆ.

‘ಘಟನೆಯಲ್ಲಿ ಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಮೃತ ರೈತರ ಕುಟುಂಬದ ಒಬ್ಬರು ಸದಸ್ಯರಿಗೆ ಸ್ಥಳೀಯ ಹಂತದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ‘ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಹೇಳಿದರು.

‘ಈ ಎಲ್ಲ ಮಾಹಿತಿಗಳಿರುವ ಒಪ್ಪಂದ ಪತ್ರವನ್ನು ರೈತರಿಗೆ ತಲುಪಿಸಲಾಗಿದೆ‘ ಎಂದು ಅವಸ್ಥಿ ತಿಳಿಸಿದರು.

ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ನಾಲ್ವರ ಬಿಜೆಪಿ ಕಾರ್ಯಕರ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು. ಉದ್ರಿಕ್ತ ರೈತರ ಗುಂಪು ಎರಡು ಎಸ್‌ಯುವಿ ಕಾರುಗಳಿಗೆ ಬೆಂಕಿ ಹಚ್ಚಿತ್ತು. ಘಟನೆಗೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು