ವಿಜಯವಾಡ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಭವನಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ನಜೀರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ಅವರ ಪತ್ನಿ ವೈ.ಎಸ್ ಭಾರತಿ, ರಾಜ್ಯದ ಮಂತ್ರಿಗಳು ಹಾಗೂ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಸಮಾರಂಭದಲ್ಲಿ ಹಾಜರಿದ್ದರು.
ಈ ಹಿಂದೆ ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಬಿಸ್ವಾ ಭೂಷನ್ ಹರಿಚಂದ್ರನ್ ಅವರನ್ನು ಚತ್ತೀಸ್‌ಗಢ ವರ್ಗಾವಣೆ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.