ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟನ ನಿವೃತ್ತ ನ್ಯಾಯಾಧೀಶ ಜಿ. ಟಿ. ನಾನವತಿ ನಿಧನ

Last Updated 18 ಡಿಸೆಂಬರ್ 2021, 21:33 IST
ಅಕ್ಷರ ಗಾತ್ರ

ಅಹಮದಾಬಾದ್‌: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಿ.ಟಿ.ನಾನಾವತಿ (87) ಅವರು ಹೃದಯಾಘಾತದಿಂದಾಗಿ ಅಹಮದಾಬಾದ್‌ನ ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

2002ರಲ್ಲಿ ಗುಜರಾತ್‌ನ ಗೋದ್ರಾ ಗಲಭೆಯ ಬಳಿಕ ನಡೆದ ಹಿಂಸಾಚಾರ ಮತ್ತು ದೆಹಲಿಯಲ್ಲಿ 1984ರಲ್ಲಿ ನಡೆದಸಿಖ್ ವಿರೋಧಿ ದಂಗೆಗಳ ಬಗ್ಗೆ ತನಿಖೆಗೆ ನಾನಾವತಿ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು.1935ರ ಫೆಬ್ರುವರಿಯಲ್ಲಿ ಜನಿಸಿದ ಅವರು, 1979ರಲ್ಲಿ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಬಳಿಕ, 1995ರಲ್ಲಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದು, 2000ದಲ್ಲಿ ನಿವೃತ್ತರಾದರು.

ಗೋದ್ರಾ ಗಲಭೆಯ ಬಳಿಕ ನಡೆದ ಘಟನೆಗಳ ಬಗ್ಗೆ ಅಂತಿಮ ತನಿಖಾ ವರದಿಯನ್ನು ಅವರು 2014ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದರು. ಇದನ್ನುಡಿಸೆಂಬರ್ 2019ರಲ್ಲಿ ಗುಜರಾತ್ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವರದಿಯಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ‘ಕ್ಲೀನ್ ಚಿಟ್’ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT