ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌, ಮೇಘಾಲಯದಲ್ಲಿ ಬಹುತೇಕ ಶಾಂತಿಯುತ ಮತದಾನ

Last Updated 27 ಫೆಬ್ರುವರಿ 2023, 16:17 IST
ಅಕ್ಷರ ಗಾತ್ರ

ಗುವಾಹಟಿ: ನಾಗಾಲ್ಯಾಂಡ್‌ ಮತ್ತು ಮೇಘಾಲಯ ವಿಧಾನಸಭೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಸಂಜೆ 5 ಗಂಟೆವರೆಗಿನ ಮಾಹಿತಿ ಪ್ರಕಾರ ಕ್ರಮವಾಗಿ ಶೇ 84.66 ಮತ್ತು 76.66ರಷ್ಟು ಮತದಾನವಾಗಿದೆ.

ಹಲವು ಮತದಾನ ಕೇಂದ್ರಗಳಿಂದ ಅಂಕಿಅಂಶಗಳು ಇನ್ನೂ ಬರಬೇಕಿರುವುದರಿಂದ ಒಟ್ಟು ಮತದಾನ ಪ್ರಮಾಣವು ಏರಿಕೆಯಾಗುವ ಸಾಧ್ಯತೆ ಇದೆ.

ನಾಗಾಲ್ಯಾಂಡ್‌ನಲ್ಲಿ ಚುನಾವಣೆ ವೇಳೆ ಮೂರು ಕಡೆ ಹಿಂಸಾತ್ಮಕ ಘಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ವೋಖಾ ಜಿಲ್ಲೆಯ ಭಂಡಾರಿ ವಿಧಾನಸಭಾ ಕ್ಷೇತ್ರದ ಮತದಾನ ಕೇಂದ್ರದಲ್ಲಿ ನಡೆದ ಸಂಘರ್ಷವನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು ಎಂದು ನಾಗಾಲ್ಯಾಂಡ್‌ನ ಮುಖ್ಯ ಚುನಾವಣಾ ಅಧಿಕಾರಿ ಶಶಾಂಕ್‌ ಶೇಖರ್‌ ತಿಳಿಸಿದರು.

ಉಭಯ ರಾಜ್ಯಗಳ ತಲಾ 60 ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ 59 ಕ್ಷೇತ್ರಗಳಲ್ಲಿ ಒಂದೇ ಬಾರಿ ಸೋಮವಾರ ಮತದಾನ ನಡೆದಿದೆ. ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಘಾಲಯದ ಸೊಹಿಯಾಂಗ್ ಕ್ಷೇತ್ರದಲ್ಲಿ ಯುಡಿಪಿ ಪಕ್ಷದ ಅಭ್ಯರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

2018ರ ಚುನಾವಣೆಯಲ್ಲಿ ಎರಡೂ ರಾಜ್ಯಗಳಲ್ಲಿ ಶೇ 85ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT