ಬುಧವಾರ, ಆಗಸ್ಟ್ 17, 2022
25 °C
ಸೋಂಕು ಲಕ್ಷಣವಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ದಿನದಂದು ಪರೀಕ್ಷೆಗೆ ಅವಕಾಶ

‘ಕೋವಿಡ್‌‘ ನಡುವೆ ಪರೀಕ್ಷೆ ನಡೆಸಲು ಹೊಸ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ನಡುವೆ ಪರೀಕ್ಷೆಗಳನ್ನು ನಡೆಸುವ ಸಂಬಂಧ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಿಂದೆ ಇದ್ದ ಸೋಂಕು ಲಕ್ಷಣಗಳುಳ್ಳ ಅಭ್ಯರ್ಥಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತಹ ಅಂಶವನ್ನು ತೆಗೆದು ಹಾಕಲಾಗಿದೆ .

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಈ ಹೊಸ ಮಾರ್ಗಸೂಚಿಯ ಪ್ರಕಾರ, ಸೋಂಕಿನ ಲಕ್ಷಣವಿರುವ ಅಭ್ಯರ್ಥಿಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಬೇಕು. ಸೋಂಕಿನಿಂದ ಗುಣಮುಖರಾಗಿ, ಅವರು ಆರೋಗ್ಯವಾಗಿದ್ದಾರೆ ಎಂದು ದೃಢಪಟ್ಟ ನಂತರ ಅವರಿಗೆ ಬೇರೆ ದಿನ, ಬೇರೆ ವಿಧಾನಗಳಲ್ಲಿ ಪರೀಕ್ಷೆ ಬರೆಯಲು ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳು ಅವಕಾಶಕ ಕಲ್ಪಿಸಬೇಕು. 

ಸೆಪ್ಟೆಂಬರ್ 2ರಂದು ಬಿಡುಗಡೆಯಾದ ಮಾರ್ಗಸೂಚಿ ಪ್ರಕಾರ ಕಂಟೈನ್ಮೆಂಟ್ ವಲಯದಿಂದ ಬರುವಂತಹ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಭೌತಿಕವಾಗಿ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ. ಬದಲಿಗೆ, ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳು ಇನ್ನೊಂದು ದಿನ ಬೇರೆ ರೀತಿಯಲ್ಲಿ ಪರೀಕ್ಷೆ ಬರೆಯುವಂತಹ ಪರ್ಯಾಯ ವ್ಯವಸ್ಥೆ ಮಾಡಿಕೊಡುತ್ತವೆ. 

ಹೊಸ ಮಾರ್ಗಸೂಚಿ ಪ್ರಕಾರ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಾಸ್ಕ್‌, ಸ್ಯಾನಿಟೈಸರ್, ಸೋಪ್, ಸೋಡಿಯಂ ಹೈಪೋಕ್ಲೋರೇಟ್ ದ್ರಾವಣ ಸೇರಿದಂತೆ  ಆರೋಗ್ಯ ಸುರಕ್ಷತಾ ಪರಿಕರಗಳನ್ನು ದೊರೆಯುವಂತಹ ವ್ಯವಸ್ಥೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳು ಅಥವಾ ಅಧಿಕಾರಿಗಳು, ಸಿಬ್ಬಂದಿ ಮಾಡಬೇಕು.

ಪರೀಕ್ಷೆ ನಡೆಸುವವರು ಮತ್ತು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು. ಪ್ರವೇಶ ಪತ್ರ ನೀಡುವ ಸಮಯದಲ್ಲೇ ಈ ಸ್ವಯಂ ಆರೋಗ್ಯ ಸ್ಥಿತಿ ಘೋಷಣಾ ಅರ್ಜಿಯನ್ನು ಭರ್ತಿ ಮಾಡಿ, ಸಲ್ಲಿಸಬೇಕು.

ಕಂಟೇನ್ಮೆಂಟ್ ವಲಯದಲ್ಲಿರುವಂತಹ ಪರೀಕ್ಷಾ ಕೇಂದ್ರಗಳಲ್ಲಿ, ಪರೀಕ್ಷೆ ನಡೆಸಲು ಅವಕಾಶ ಇರುವುದಿಲ್ಲ.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು