ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್‌ ಪ್ರಕರಣ: ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಿಚಾರಣೆ ಇಂದು

Last Updated 10 ಸೆಪ್ಟೆಂಬರ್ 2020, 3:39 IST
ಅಕ್ಷರ ಗಾತ್ರ

ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಮಂಗಳವಾರ ಸಂಜೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯವಿಚಾರಣೆಯನ್ನುಮುಂಬೈನ ವಿಶೇಷ ನ್ಯಾಯಾಲಯ ಇಂದು (ಗುರುವಾರ) ನಡೆಸಲಿದೆ.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನುಬಂಧಿಸಲಾಗಿದ್ದು ಈ ತಿಂಗಳ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸಬೇಕೆಂದು ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಎನ್‌ಸಿಬಿಯಿಂದ ಬಂಧಿತರಾಗಿರುವ ರಿಯಾ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಯ ವಿಚಾರಣೆಯು ಸಹ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.

ಸುಶಾಂತ್ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ರಿಯಾ, ಆಕೆಯ ಪೋಷಕರಾದ ಇಂದ್ರಜಿತ್, ಸಂಧ್ಯಾಚಕ್ರವರ್ತಿ, ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ಶೃತಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT