ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಸ್ಪರ್ಧಿಸುವುದು ವ್ಯಕ್ತಿಯ ಮೂಲಭೂತ ಹಕ್ಕಲ್ಲ ಎಂದ ಸುಪ್ರೀಂ ಕೋರ್ಟ್

Last Updated 14 ಸೆಪ್ಟೆಂಬರ್ 2022, 6:15 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣೆಗೆ ಸ್ಪರ್ಧಿಸುವುದು ವ್ಯಕ್ತಿಯ ಮೂಲಭೂತ ಹಕ್ಕೂ ಅಲ್ಲ, ಕಾನೂನಿನ ಅನ್ವಯ ಸಾಮಾನ್ಯ ಹಕ್ಕೂ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಅಭಿಪ್ರಾಯಪಟ್ಟಿದೆ.

‘ನನ್ನ ಹೆಸರನ್ನು ಸೂಚಿಸಲು ಮತ್ತು ಅನುಮೋದಿಸಲು ಯಾರೂ ಇಲ್ಲದ ಕಾರಣದಿಂದಾಗಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದ ನನ್ನ ಮೂಲಭೂತ ಹಕ್ಕುಗಳಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗಿದೆ’ ಎಂದು ವ್ಯಕ್ತಿಯೊಬ್ಬರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ತಿರಸ್ಕೃತವಾದ್ದರಿಂದ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರು, ರಾಜ್ಯಸಭೆಗೆ ಸ್ಪರ್ಧಿಸಬೇಕಾದಲ್ಲಿ ಸ್ಪರ್ಧಿಯ ಹೆಸರನ್ನು ಸೂಚಿಸಬೇಕು ಮತ್ತು ಅನುಮೋದಿಸಬೇಕು ಎಂದು ಜನಪ್ರಾತಿನಿಧ್ಯ ಕಾಯ್ದೆ, 1950 ಹಾಗೂ ಚುನಾವಣಾ ನಿಯಮಗಳು, 1961ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದರು.

ನಾಲ್ಕು ವಾರಗಳ ಒಳಗಾಗಿ ಸುಪ್ರೀಂ ಕೋರ್ಟ್‌ನ ಕಾನೂನು ನೆರವು ಸಮಿತಿಗೆ ಒಂದು ಲಕ್ಷ ದಂಡ ಕಟ್ಟಬೇಕು ಎಂದೂ ಆದೇಶಿಸಿದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ತಿರಸ್ಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT