ತಿರುವನಂತಪುರ: ಕೇರಳದಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
‘ಝಿಕಾ ವೈರಸ್ ಸೋಂಕು ಪರಿಸ್ಥಿತಿ ನಿಭಾಯಿಸಲು ಇಲಾಖೆ ಸನ್ನದ್ಧವಾಗಿದೆ. ಕೋವಿಡ್ ಪರಿಸ್ಥಿತಿಯನ್ನೂ ಹತೋಟಿಯಲ್ಲಿ ಇಟ್ಟುಕೊಳ್ಳಲು ಇಲಾಖೆಯು ಸದಾ ಪ್ರಯತ್ನಿಸಿದೆ. ಆಮ್ಲಜನಕ ಪೂರೈಕೆ ಇಲ್ಲದೆ ರಾಜ್ಯದಲ್ಲಿ ಯಾರೊಬ್ಬರೂ ಸಾವಿಗೀಡಾಗಿಲ್ಲ’ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಕೇರಳದಲ್ಲಿ ಝಿಕಾ ವೈರಸ್‌ನ ಮೊದಲ ಪ್ರಕರಣ ಪತ್ತೆಯಾಗಿತ್ತು. 24 ವರ್ಷದ ಗರ್ಭಿಣಿಗೆ ಸೊಳ್ಳೆಯಿಂದ ಹರಡುವ ಈ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ತಿಳಿಸಿದ್ದರು. ಬಳಿಕ ಇಬ್ಬರು ವೈದ್ಯರು ಸೇರಿ 13 ಮಂದಿಯ ಪ್ರಯೋಗಾಲಯದ ಮಾದರಿಯನ್ನು ಪುಣೆಯ ಎನ್‌ಐವಿಗೆ ಕಳುಹಿಸಲಾಗಿತ್ತು. ಅವರಲ್ಲೂ ಸೋಂಕು ದೃಢಪಟ್ಟಿತ್ತು.ಇದೀಗ, ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ.
ನೆರೆಯ ರಾಜ್ಯದಲ್ಲಿ ಝಿಕಾ ಹೆಚ್ಚುತ್ತಿರುವುದು ಕರ್ನಾಟಕಕ್ಕೂ ಎಚ್ಚರಿಕೆಯ ಗಂಟೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.