ಗುರುವಾರ , ಜುಲೈ 7, 2022
25 °C

ಆಸ್ಪತ್ರೆಗೆ ಮತ್ತೆ ದಾಖಲಾದ ಲಾಲು ಪ್ರಸಾದ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅನಾರೋಗ್ಯ ಕಾರಣ ದೆಹಲಿ ಏಮ್ಸ್‌ಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಬುಧವಾರ ಮುಂಜಾನೆ 3 ಗಂಟೆಗೆ ಮನೆಗೆ ತೆರಳಿದ ಬಳಿಕ ಮತ್ತೆ ಮಧ್ಯಾಹ್ನ 12.30 ಗಂಟೆಗೆ  ಆಸ್ಪತ್ರೆಯ ಜನರಲ್‌ ವಾರ್ಡ್‌ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್‌ ಅವರು  ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಮಂಡಳಿಯ ಶಿಫಾರಸ್ಸಿನ ಮೇರೆಗೆ ಮಂಗಳವಾರ ರಾತ್ರಿ 9 ಗಂಟೆಗೆ ದೆಹಲಿ ಏಮ್ಸ್‌ಗೆ ದಾಖಲಾಗಿದ್ದರು. ರಾತ್ರಿ ಪೂರ್ತಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು