ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಸಚಿವ ಸಂಪುಟದಲ್ಲಿ ಆರ್‌ಜೆಡಿ ಪ್ರಾಬಲ್ಯ, ನಿತೀಶ್‌ಗೆ ಗೃಹ ಖಾತೆ ಸಾಧ್ಯತೆ

Last Updated 10 ಆಗಸ್ಟ್ 2022, 10:01 IST
ಅಕ್ಷರ ಗಾತ್ರ

ಪಟ್ನಾ: ಮಹಾ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಿತೀಶ್ ಅವರು ಪ್ರಮುಖ ಗೃಹ ಖಾತೆಯನ್ನು ತನ್ನ ಬಳಿಯೇ ಇಟ್ಟುಕೊಳ್ಳುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಆರ್‌ಜೆಡಿಗೆ ಹೆಚ್ಚಿನ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹೊಸ ಸಚಿವ ಸಂಪುಟಕ್ಕೆ ಸಂಬಂಧಿಸಿ ಒಪ್ಪಂದಕ್ಕೆ ಬರಲಾಗಿದೆ. 35 ಅಥವಾ ಅದಕ್ಕಿಂತ ಹೆಚ್ಚು ಮಂದಿಯನ್ನು ಒಳಗೊಂಡ ಸಚಿವ ಸಂಪುಟ ರಚನೆಯಾಗಲಿದ್ದು, ಜೆಡಿ(ಯು), ಆರ್‌ಜೆಡಿ, ಕಾಂಗ್ರೆಸ್‌, ಎಚ್‌ಎಎಂಗೆ ಪ್ರಾತಿನಿಧ್ಯ ಇರಲಿದೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ವಿರುದ್ಧದ ಪಕ್ಷಗಳ ಬಣ ಸೇರಿರುವ ನಿತೀಶ್ ಕುಮಾರ್ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಅಧಿಕಾರ ಹಂಚಿಕೆ ಸೂತ್ರದ ವಿಚಾರಕ್ಕೆ ಬಂದರೆ ಸಚಿವ ಸಂಪುಟದಲ್ಲಿ ಆರ್‌ಜೆಡಿಗೆ ಹೆಚ್ಚು ಸ್ಥಾನ ದೊರೆಯಲಿದೆ ಎಂದೇ ಹೇಳಲಾಗುತ್ತಿದೆ.

‘ಜೆಡಿ(ಯು) ಪಕ್ಷದಿಂದ 13 ಮಂದಿ, ಆರ್‌ಜೆಡಿಯಿಂದ 16 ಮಂದಿ ಸಚಿವಾರಗುವ ನಿರೀಕ್ಷೆ ಇದೆ. ಕಾಂಗ್ರೆಸ್‌ಗೆ ನಾಲ್ಕು ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ನೇತೃತ್ವದ ಎಚ್‌ಎಎಂಗೆ ಒಂದು ಸಚಿವ ಸ್ಥಾನ ದೊರೆಯಬಹುದು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT