ಮಂಗಳವಾರ, ಮೇ 17, 2022
25 °C

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ; ಕರ್ನಾಟಕದ ಒಬ್ಬರು ಸೇರಿ ಐವರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನೊಯಿಡಾ: ಉತ್ತರ ಪ್ರದೇಶದ ಗ್ರೇಟರ್‌ ನೊಯಿಡಾದಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಹಾಗೂ ಮಹಾರಾಷ್ಟ್ರದ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೀಂದ್ರ ಬೊಲೆರೊ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ.

ಗೌತಮ್ ಬುದ್ಧ ನಗರ ಪೊಲೀಸ್‌ ವಕ್ತಾರರೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, 'ಏಳು ಜನರಿದ್ದ ಮಹೀಂದ್ರ ಬೊಲೆರೊ ಆಗ್ರಾದಿಂದ ನೋಯಿಡಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ವೊಂದಕ್ಕೆ ಜೆವರಾ ಟೋಲ್‌ ಬಳಿ ಡಿಕ್ಕಿ ಹೊಡೆದಿದೆ' ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.

'ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಪ್ರಾಣಹಾನಿಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಮೃತರ ಕುಟುಂಬದವರಿಗಾಗಿ ಸಂತಾಪ ಸೂಚಿಸಿದ್ದಾರೆ' ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು