ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಹೆದ್ದಾರಿಗಳ ಗುಂಟ ಒಎಫ್‌ಸಿ ಕೇಬಲ್ ಅಳವಡಿಕೆ: ರಸ್ತೆ ಸಾರಿಗೆ ಸಚಿವಾಲಯ

Last Updated 22 ಜನವರಿ 2023, 19:22 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರ ಕಿ.ಮೀ. ಉದ್ದದಷ್ಟು ರಾಷ್ಟ್ರೀಯ ಹೆದ್ದಾರಿಗುಂಟ ಆಪ್ಟಿಕಲ್‌ ಫೈಬರ್‌ ಕೇಬಲ್ (ಒಎಫ್‌ಸಿ) ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಯೋಜನೆ ರೂಪಿಸಿದೆ.

₹ 6 ಸಾವಿರ ಕೋಟಿಗೂ ಅಧಿಕ ವೆಚ್ಚದ ಈ ಯೋಜನೆಗೆ ಸಚಿವಾಲಯವು ಟೆಂಡರ್‌ ಆಹ್ವಾನಿಸಿದೆ. ಪ್ರಾಯೋಗಿಕವಾಗಿ ಹೈದರಾಬಾದ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ₹ 500 ಕೋಟಿ ವೆಚ್ಚದಲ್ಲಿ ಒಎಫ್‌ಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಬ್ರಾಡ್‌ಬ್ಯಾಂಡ್‌ ಕಾರ್ಯಕ್ರಮದ ಅಂಗವಾಗಿ ಈ ಬೃಹತ್‌ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಬರುವ ದಿನಗಳಲ್ಲಿ ದೇಶದಲ್ಲಿ 5ಜಿ ಸೇವೆ ಹೆಚ್ಚು ಬಳಕೆಯಾಗುವ ನಿರೀಕ್ಷೆ ಇದ್ದು, ಒಎಫ್‌ಸಿ ಅಳವಡಿಕೆ ಇದಕ್ಕೆ ಪೂರಕವಾಗಿರಲಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT