ಬುಧವಾರ, ಅಕ್ಟೋಬರ್ 5, 2022
27 °C

ಚೆನ್ನೈ: ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆ.ಜಿ.ಗಟ್ಟಲೆ ಚಿನ್ನಾಭರಣ ಕಳವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳುನಾಡಿನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದ ದರೋಡೆಕೋರರು ಲಾಕರ್‌ನಲ್ಲಿದ್ದ 32 ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. 

ಚೆನ್ನೈ ನಗರದ ಅರುಂಬಕ್ಕಂ ಪ್ರದೇಶದಲ್ಲಿರುವ ಫೆಡ್‍ಬ್ಯಾಂಕ್ ಗೋಲ್ಡ್ ಲೋನ್‍ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದೆ. 

ಮುಖಕ್ಕೆ ಮಾಸ್ಕ್‌ ಧರಿಸಿ ಬ್ಯಾಂಕ್‌ನೊಳಗೆ ನುಗಿದ್ದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಟ್ರಾಂಗ್ ರೂಮ್‍ನ ಕೀಗಳನ್ನು ತೆಗೆದುಕೊಂಡು ಲಾಕರ್‌ನಲ್ಲಿದ್ದ 32 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು  ಪೊಲೀಸ್ ಕಮಿಷನರ್ ಶಂಕರ್ ಜೀವಲ್ ತಿಳಿಸಿದ್ದಾರೆ.

ದರೋಡೆಕೋರರಿಗೆ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ಸಹಕಾರ ನೀಡಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

‘ದರೋಡೆ ನಡೆದ ಸಂದರ್ಭ ಕಳ್ಳರು ನೀಡಿದ್ದ ತಂಪು ಪಾನೀಯ ಸೇವಿಸಿ ಪ್ರಜ್ಞಾಹೀನನಾಗಿದ್ದೆ ಎಂದು ಸೆಕ್ಯುರಿಟಿ ಗಾರ್ಡ್ ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು