ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾವಣಿ ಕುಸಿದ ಪ್ರಕರಣ: ಆರೋಪಿಗಳ ವಿರುದ್ಧ ಎನ್ಎಸ್‌ಎ ಅನ್ವಯ ಮೊಕದ್ದಮೆ

Last Updated 5 ಜನವರಿ 2021, 10:59 IST
ಅಕ್ಷರ ಗಾತ್ರ

ಲಖನೌ: ಸ್ಮಶಾನದಲ್ಲಿ ಕಟ್ಟಡದ ಚಾವಣಿ ಕುಸಿದು 24 ಜನರು ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ಮುರ್ದಾನಗರದಲ್ಲಿ ನಡೆದಿದ್ದ ಅವಘಡದಲ್ಲಿ ಒಟ್ಟು 24 ಜನರು ಸತ್ತಿದ್ದು, ಇತರೆ 17 ಮಂದಿ ಗಾಯಗೊಂಡಿದ್ದರು. ಕಟ್ಟಡ ನಿರ್ಮಿಸಲು ಆಗಿದ್ದ ವೆಚ್ಚವನ್ನು ಸಂಬಂಧಿತ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳಿಂದ ವಸೂಲಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಅಲ್ಲದೆ, ರಾಜ್ಯ ಸರ್ಕಾರವು ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT