ನವದೆಹಲಿ: ಗುರುಗ್ರಾಮದಲ್ಲಿ ವಸತಿ ಕಟ್ಟಡದ ಆರನೇ ಮಹಡಿಯಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿಯ ಒಂದು ಭಾಗವು ಕುಸಿದು ಇಬ್ಬರು ಮೃತಪಟ್ಟಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಕ್ಟರ್ 109ರಲ್ಲಿ ಚಿಂಟೆಲ್ಸ್ ಪ್ಯಾರಾಡೈಸೊದಲ್ಲಿ ಆರನೇ ಮಹಡಿಯಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಗುಜರಾತ್: ಪಾಕ್ನ 9 ಮೀನುಗಾರರ ದೋಣಿ ವಶ

ಬಳಿಕ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ಹಹಣಾ ಪಡೆ (ಎಸ್‌ಡಿಆರ್‌ಎಫ್), ನಾಗರಿಕ ರಕ್ಷಣಾ ತಂಡಗಳು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದವು.

ಅವಶೇಷಗಳಡಿ ಸಿಲುಕಿದರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಚಿಂಟೆಲ್ಸ್ ಪ್ಯಾರಾಡೈಸೊದಲ್ಲಿ ಒಟ್ಟು 530 ಪ್ಲ್ಯಾಟ್‌ಗಳಿದ್ದು, 400ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ.

ಆರನೇ ಮಹಡಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಟ್ಟಡದ ಮೂರರಿಂದ ಆರನೇ ಮಹಡಿ ವರೆಗೆ ಖಾಲಿಯಿದ್ದು, ಮೊದಲ ಹಾಗೂ ಎರಡನೇ ಮಹಡಿಯಲ್ಲಿ ಜನರು ವಾಸಿಸುತ್ತಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.