ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಪ್ರಿಯಾಂಕಾ ಸ್ವಾಗತಕ್ಕಾಗಿ ಹೂವಾದ ರಸ್ತೆ...!

Last Updated 25 ಫೆಬ್ರವರಿ 2023, 11:44 IST
ಅಕ್ಷರ ಗಾತ್ರ

ರಾಯಪುರ: ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಛತ್ತೀಸ್‌ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನ ದಳಗಳಿಂದ ಸಿಂಗರಿಸಲಾಗಿತ್ತು.

ಗುಲಾಬಿ ದಳಗಳಿಂದಾಗಿ ರಸ್ತೆ ಕೆಂಪಗೆ ಕಾಣುತ್ತಿರುವ ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ ಅವರು ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕಾ ಅವರಿಗೆ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು. ನಂತರ ಗುಲಾಬಿಯಿಂದ ಸಿಂಗರಿಸಿದ್ದ ರಸ್ತೆ ಮೂಲಕ ಕರೆತಂದರು.

ಕಾಂಗ್ರೆಸ್‌ನ 85ನೇ ಮಹಾ ಅಧಿವೇಶನವು ರಾಯಪುರದಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಇದರ ಅಧ್ಯಕ್ಷತೆ ವಹಿಸಿದ್ದಾರೆ. ಕಾಂಗ್ರೆಸ್‌ ಸಂಚಾಲನಾ ಸಮಿತಿ ಸಭೆ ಶುಕ್ರವಾರ ಬೆಳಗ್ಗೆ ನಡೆಯಿತು.

ಈ ಸಭೆಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಾಜರಾಗಿರಲಿಲ್ಲ. ಇಂದು ನಡೆಯುತ್ತಿರುವ ಮಹಾ ಅಧಿವೇಶನದಲ್ಲಿ ಮೂವರೂ ಭಾಗವಹಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT