ಸೋಮವಾರ, ಜುಲೈ 4, 2022
21 °C

ದೆಹಲಿ: ಮಾಸ್ಕ್ ಧರಿಸದವರಿಗೆ ₹ 2000 ದಂಡ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ಓಡಾಡುವವರಿಗೆ ವಿಧಿಸಲಾಗುತ್ತಿದ್ದ ದಂಡವನ್ನು ₹ 500ರ ಬದಲು ₹ 2000ಕ್ಕೆ ಹೆಚ್ಚಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಸಭೆ ವೇಳೆ ಈ ಕ್ರಮ ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾತನಾಡಿರುವ ಕೇಜ್ರಿವಾಲ್, ‘ಸಾಕಷ್ಟು ಜನರು ಮಾಸ್ಕ್‌ಗಳನ್ನು ಧರಿಸುತ್ತಿದ್ದಾರೆ. ಆದರೆ ಕೆಲವರು ಇನ್ನೂ ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ದಂಡವನ್ನು ₹ 500ರ ಬದಲು ₹ 2000ಕ್ಕೆ ಹೆಚ್ಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮುಂದುವರಿದು, ‘ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ದೆಹಲಿ ಜನರ ಪಾಲಿಗೆ ಸಂಕಷ್ಟದ ಸಮಯವಾಗಿದೆ ಎಂದು ಎಲ್ಲ ಪಕ್ಷದವರಿಗೆ ತಿಳಿಸಿದ್ದೇನೆ. ಇದು ರಾಜಕೀಯ ಮಾಡುವ ಸಮಯವಲ್ಲ. ಅದಕ್ಕಾಗಿ ಜೀವನದುದ್ದಕ್ಕೂ ಸಮಯವಿದೆ. ನಾವು ಕೆಲವು ದಿನಗಳ ಕಾಲ ರಾಜಕೀಯ ಮತ್ತು ಆರೋಪಗಳನ್ನು ಪಕ್ಕಕ್ಕಿಡಬೇಕು. ಇದು ಜನರಿಗೆ ಸೇವೆ ಸಲ್ಲಿಸುವ ಸಮಯ. ಇದನ್ನು ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ’ ಎಂದು ಹೇಳಿದರು.

ಸೋಂಕು ಭೀತಿಯಿಂದಾಗಿ ಕೊಳಗಳು, ನದಿಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಲಾಗಿದೆ. ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.

ಕೋವಿಡ್‌: ದೆಹಲಿ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ನವದೆಹಲಿ (ಪಿಟಿಐ): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವುದಕ್ಕೆ ಆಮ್‌ ಆದ್ಮಿ ಪಕ್ಷದ (ಎಎಪಿ) ಸರ್ಕಾರವನ್ನು ಗುರುವಾರ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲು ಆರಂಭಿಸಿದಾಗ ಸರ್ಕಾರ ಏಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರಶ್ನಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು