ಮುಂಬೈ: ಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ ₹2,000 ಕೋಟಿಗೂ ಮಿಗಿಲಾದ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನಾದ (ಉದ್ಧವ್ ಠಾಕ್ರೆ ಬಣದ) ಸಂಸದ ಸಂಜಯ್ ರಾವುತ್ ಭಾನುವಾರ ಮುಂಬೈನಲ್ಲಿ ಆರೋಪಿಸಿದ್ದಾರೆ.
‘ನನಗೆ ಖಚಿತ ಮಾಹಿತಿ ಸಿಕ್ಕಿದೆ, ನನಗೆ ವಿಶ್ವಾಸವಿದೆ, ಇದು ಕೇವಲ ಪ್ರಾಥಮಿಕ ಅಂಕಿ ಅಂಶ ಮಾತ್ರ. ಇದು ಶೇಕಡ 100ರಷ್ಟು ದೃಢ ಮಾಹಿತಿ’ ಎಂದು ರಾವತ್ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.
‘ಇದು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡುಕೇಳರಿಯದ ಸಂಗತಿ. ಇನ್ನೂ ಕೆಲವು ವಿಷಯಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು’ ಎಂದು ರಾವತ್ ಹೇಳಿದ್ದಾರೆ. ಸಂಜಯ್ ರಾವುತ್ ಆರೋಪಗಳಿಂದಾಗಿ ಭಾರತೀಯ ಚುನಾವಣಾ ಆಯೋಗದ (ಇಸಿಐ)ದ ನಿರ್ಧಾರದ ಮೇಲೆ ಅನುಮಾನ ಮೂಡುವಂತಾಗಿದೆ.
ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಬಣಕ್ಕೆ ಮೂಲ ಶಿವಸೇನಾದ ಹೆಸರು ಮತ್ತು 'ಬಿಲ್ಲು-ಬಾಣ'ದ ಚಿಹ್ನೆಯನ್ನು ಮಂಜೂರು ಮಾಡಿ ಚುನಾವಣಾ ಆಯೋಗ ಇತ್ತೀಚೆಗೆ ಆದೇಶಿಸಿತ್ತು. ಇದರ ಹಿನ್ನೆಲೆಯಲ್ಲಿ ರಾವುತ್ ಈ ಹೇಳಿಕೆ ನೀಡಿದ್ದಾರೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.