ನವದೆಹಲಿ: ಇತ್ತೀಚೆಗೆ ನಿಧನರಾದ ಕರ್ನಾಟಕದ ಹಾಲಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಮತ್ತು ಮಾಜಿ ರಾಜ್ಯಸಭಾ ಸದಸ್ಯೆ ಕಪಿಲಾ ವಾತ್ಸ್ಯಾಯನ ಅವರಿಗೆ ಶುಕ್ರವಾರ ರಾಜ್ಯಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಮೌನ ಆಚರಿಸಿ, ಮೂವತ್ತು ನಿಮಿಷಗಳ ಕಾಲ ಕಲಾಪವನ್ನು ಮುಂದೂಡಲಾಯಿತು.

ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ಅವರು ಗಸ್ತಿ ಮತ್ತು ವಾತ್ಸ್ಯಾಯನ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಕರ್ನಾಟಕದ ಅಶೋಕ ಗಸ್ತಿ ಅವರು ಇದೇ ಮೊದಲ ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಕಳೆದ ಜೂನ್ 26ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಅನಾರೋಗ್ಯದ ಕಾರಣ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ ಎಂದು ವೆಂಕಯ್ಯನಾಯ್ಡು ಸಂತಾಪ ನುಡಿಯಲ್ಲಿ ಸ್ಮರಿಸಿದರು.

55 ವರ್ಷದ ಅಶೋಕ ಗಸ್ತಿಯವರು ಸೆಪ್ಟೆಂಬರ್ 17 ರಂದು ಹಾಗೂ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ವತ್ಸ್ಯಯಾನ ಅವರು ಸೆಪ್ಟೆಂಬರ್ 16ರಂದು ನಿಧನರಾದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.