ಮಂಗಳವಾರ, ಜನವರಿ 26, 2021
20 °C

ಇಂದಿನಿಂದ ಆರ್‌ಎಸ್‌ಎಸ್‌ ಅಂಗಸಂಸ್ಥೆಗಳ ರಾಷ್ಟ್ರೀಯ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಹಲವು ಅಂಗಸಂಸ್ಥೆಗಳ ರಾಷ್ಟ್ರೀಯ ಸಭೆಯು ಗುಜರಾತ್‌ನ ಗಾಂಧಿನಗರದಲ್ಲಿ ಜ.5ರಿಂದ ಜ.7ರವರೆಗೆ ನಡೆಯಲಿದ್ದು, ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಆರ್‌ಎಸ್‌ಎಸ್‌ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಭಾಗವಹಿಸಲಿದ್ದಾರೆ ಎಂದು ಸಂಘದ ಪದಾಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. 

ಆರ್‌ಎಸ್‌ಎಸ್‌ನ ಅಂದಾಜು 25 ಅಂಗಸಂಸ್ಥೆಗಳ 150 ಪ್ರತಿನಿಧಿಗಳು ಈ ಮೂರು ದಿನಗಳ ಸಭೆಯಲ್ಲಿ ಭಾಗವಹಿಸಲಿದ್ದು, ತಮ್ಮ ಅನುಭವ, ಸಲಹೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರಚಾರ್‌ ಪ್ರಮುಖ್‌ ಅರುಣ್‌ ಕುಮಾರ್‌ ಸುದ್ದಿಗಾರರಿಗೆ ತಿಳಿಸಿದರು. ಗಾಂಧಿನಗರದ ಕರ್ನಾವಟಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಸುರೇಶ್‌ ಭಯ್ಯಾಜಿ ಜೋಷಿ, ಅಖಿಲ ಭಾರತ ವನವಾಸಿ ಕಲ್ಯಾಣ ಆಶ್ರಮದ ಹಿರಿಯ ನಾಯಕರು, ಎಬಿವಿಪಿ, ಭಾರತೀಯ ಮಜ್ದೂರ್‌ ಸಂಘ, ರಾಷ್ಟ್ರ ಸೇವಿಕಾ ಸಮಿತಿ, ಸ್ವದೇಶಿ ಜಾಗರಣ್‌ ಮಂಚ್‌, ವಿಶ್ವ ಹಿಂದೂ ಪರಿಷತ್‌ ಮುಂತಾದ ಅಂಗಸಂಸ್ಥೆಗಳ ಪ್ರತಿನಿಧಿಗಳು ಈ ಸಮನ್ವಯ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೋಷಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು