ಭಾನುವಾರ, ಸೆಪ್ಟೆಂಬರ್ 26, 2021
25 °C

ಉತ್ಪಾದನೆ ವಿಕೇಂದ್ರೀಕರಣದಿಂದ ದೇಶದ ಆರ್ಥಿಕತೆಗೆ ಪ್ರಯೋಜನ: ಮೋಹನ್ ಭಾಗವತ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಉತ್ಪಾದನೆಯ ವಿಕೇಂದ್ರೀಕರಣದಿಂದ ದೇಶದ ಆರ್ಥಿಕತೆಗೆ ಪ್ರಯೋಜನವಾಗಲಿದೆ. ಉದ್ಯೋಗ ಮತ್ತು ಸ್ವ ಉದ್ಯೋಗಾವಕಾಶ ಸೃಷ್ಟಿಗೆ ನೆರವಾಗಲಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮುಂಬೈ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನೈಸರ್ಗಿಕ ಸಂಪನ್ಮೂಲಗಳ ಮಿತವಾದ ಬಳಕೆಯನ್ನು ಖಾತರಿಪಡಿಸಲು ‘ನಿಯಂತ್ರಿತ ಗ್ರಾಹಕತ್ವ’ದ ಅಗತ್ಯವಿದೆ ಎಂದಿದ್ದಾರೆ.

ಓದಿ: 

ನಾವು ಎಷ್ಟು ಸಂಪಾದಿಸುತ್ತೇವೆ ಎಂಬುದರ ಆಧಾರದಲ್ಲಿ ಜೀವನ ಗುಣಮಟ್ಟವನ್ನು ನಿರ್ಧರಿಸಬಾರದು. ನಾವು ಎಷ್ಟು ಮರಳಿ ನೀಡುತ್ತೇವೆ ಎಂಬುದರ ಆಧಾರದಲ್ಲಿ ನಿರ್ಧರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಎಲ್ಲರ ಹಿತವನ್ನು ಪರಿಗಣಿಸಿದಾಗ ನಮಗೆ ಸಂತೋಷವಾಗುತ್ತದೆ. ಸಂತಸವಾಗಿರಲು ನಾವು ಉತ್ತಮ ಹಣಕಾಸು ಹೊಂದಿರಬೇಕು. ಇದಕ್ಕಾಗಿ ನಾವು ಹಣಕಾಸಿನ ಸಾಮರ್ಥ್ಯ ಹೊಂದಿರಬೇಕಾಗುತ್ತದೆ. ‘ಸ್ವದೇಶಿ’ಯಾಗುವುದು ಎಂದರೆ ನಮ್ಮದೇ ನಿಯಮಗಳು ಮತ್ತು ಷರತ್ತುಗಳ ಆಧಾರದಲ್ಲಿ ವ್ಯವಹಾರ ನಡೆಸುವುದು’ ಎಂದು ಭಾಗವತ್ ತಿಳಿಸಿದ್ದಾರೆ.

ಓದಿ: 

ಕೈಗಾರಿಕೆಗಳನ್ನು ಬೆಂಬಲಿಸುವುದು ಮತ್ತು ಪ್ರೋತ್ಸಾಹಿಸುವುದು ಸರ್ಕಾರದ ಕೆಲಸವಾಗಿದೆ. ದೇಶದ ಅಭಿವೃದ್ಧಿಗೆ ಮುಖ್ಯವಾದುದನ್ನು ಉತ್ಪಾದಿಸಲು ಸರ್ಕಾರ ನಿರ್ದೇಶನಗಳನ್ನು ನೀಡಬೇಕು. ಉತ್ಪಾದನೆಯು ಜನ ಕೇಂದ್ರಿತವಾಗಬೇಕು ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು