ಬುಧವಾರ, ಮಾರ್ಚ್ 22, 2023
22 °C

ಮಾನನಷ್ಟ ಮೊಕದ್ದಮೆ: ಮಾ.4 ರಂದು ರಾಹುಲ್ ಅರ್ಜಿ ಕುರಿತ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ಶಾಶ್ವತ ವಿನಾಯಿತಿ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಭಿವಂಡಿಯ ನ್ಯಾಯಾಲಯವು, ಈ ಕುರಿತ ಆದೇಶವನ್ನು ಮಾರ್ಚ್‌ 4ರಂದು ಆದೇಶ ಪ್ರಕಟಿಸುವುದಾಗಿ ಶನಿವಾರ ಹೇಳಿದೆ.

ತಾವು ದೆಹಲಿಯಲ್ಲಿ ನೆಲೆಸಿರುವುದರಿಂದ ಹಾಗೂ ಸಂಸದರಾಗಿರುವುದರಿಂದ ಠಾಣೆ ಜಿಲ್ಲೆಯಲ್ಲಿರುವ ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಬೇಕೆಂದು ರಾಹುಲ್‌ ಗಾಂಧಿ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

2014ರಲ್ಲಿ ಭಿವಂಡಿಯಲ್ಲಿ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ ಅವರು ಮಹಾತ್ಮ ಗಾಂಧಿ ಅವರ ಹತ್ಯೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದರು. ಈ ಸಂಬಂಧ ರಾಹುಲ್‌ ವಿರುದ್ಧ ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್‌ ಕುಂಟೆ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು